ಗಂಡಸಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೋಬಳಿಯ ಚಿಂದೆನಹಳ್ಳಿಗಡಿ ಕರ್ನಾಟಕ ಪಬ್ಲಿಕ್ ಶಾಲೆಗೆ ಶೇ 100 ಫಲಿತಾಂಶ ಲಭ್ಯವಾಗಿದೆ.

ಶಾಲೆಯ ವರ್ಷಿಣಿ ಡಿ. 590 ಅಂಕ ಗಳಿಸಿ, ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. 57 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ 39 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದ್ದು, ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ, ಪೋಷಕರ ಪ್ರೋತ್ಸಾಹ ಕಾರಣ. ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಶಾಲಾ ಮುಖ್ಯ ಶಿಕ್ಷಕ ಚಂದ್ರೇಗೌಡ ತಿಳಿಸಿದ್ದಾರೆ.

ಹಾಸನ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲ್ಲೂಕಿನ ಶಾಂತಿಗ್ರಾಮ ಕೆ.ಪಿ.ಎಸ್. ಪ್ರೌಢಶಾಲೆ ಪ್ರಥಮ ಬಾರಿಗೆ ಶೇ 100 ಫಲಿತಾಂಶ ದಾಖಲಿಸಿದೆ.

ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು 38 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 4 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕಿ ದಾಕ್ಷಾಯಿಣಿ, ಸಹ ಶಿಕ್ಷಕಿ ತನುಜಾ, ಎಲ್ಲ ಶಿಕ್ಷಕರ ಶ್ರಮದಿಂದಲೇ ಈ ಅಪೂರ್ವ ಸಾಧನೆ ಸಾಧ್ಯವಾಗಿದೆ ಎಂದು ಶಾಂತಿಗ್ರಾಮ ಹಳೆಯ ಶಾಲಾ-ಕಾಲೇಜು ವಿದ್ಯಾರ್ಥಿ ಸಂಘದ ಸಂಚಾಲಕ ಜಿ.ಆರ್. ಮಂಜೇಶ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-36-1569411742

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.