ಕಾರವಾರ: ‘ಎಸ್ಎಸ್ಎಲ್ಸಿ ಎರಡನೇ ವಾರ್ಷಿಕ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪರೀಕ್ಷೆ ಕೇಂದ್ರಗಳಲ್ಲಿ ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಎಚ್ಚರವಹಿಸಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದರು.

ಮೇ 18ರಿಂದ 23ರ ವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಎರಡನೇ ವಾರ್ಷಿಕ ಪರೀಕ್ಷೆಯ ಪೂರ್ವಸಿದ್ಧತೆ ಕುರಿತು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

‘ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷೆಗಳು ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಿ. ಪ್ರತಿ ತಾಲ್ಲೂಕಿಗೆ ಒಂದು ಪರೀಕ್ಷಾ ಕೇಂದ್ರವಿರುವ ಕಾರಣದಿಂದ ಪ್ರತಿ ಕೇಂದ್ರಗಳಲ್ಲಿಯೂ ಮೂಲಸೌಕರ್ಯಗಳು ಗರಿಷ್ಠಮಟ್ಟದಲ್ಲಿ ಇರುವಂತೆ ಎಚ್ಚರವಹಿಸಿ. ಸಿಸಿಟಿವಿ ಕ್ಯಾಮೆರಾ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು’ ಎಂದರು.

‘ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಬಸ್ಗಳ ಕೊರತೆಯಾಗಬಾರದು. ಪರೀಕ್ಷೆ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ಎಚ್ಚರವಹಿಸಬೇಕು’ ಎಂದರು.

‘ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಒಟ್ಟು 1,773 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪ್ರತಿ ಕೇಂದ್ರಗಳಿಗೆ ವೀಕ್ಷಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ’ ಎಂದು ಪರೀಕ್ಷೆ ನೋಡಲ್ ಅಧಿಕಾರಿ ಶುಭಾ ನಾಯಕ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-20-320861643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.