ಖಾನಾಪುರ: ತಾಲ್ಲೂಕಿನ ಬೀಡಿ ಗ್ರಾಮದ ಹೋಲಿ ಕ್ರಾಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಿವ್ಯಾ ಪ್ರದೀಪ ದೇಸಾಯಿ ಎಸ್ಎಸ್ಎಲ್ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲನೇ ಸ್ಥಾನ ಗಳಿಸಿದ್ದಾರೆ.

ಪರೀಕ್ಷೆಯ ಫಲಿತಾಂಶ ಬಂದಾಗ ದಿವ್ಯಾಳಿಗೆ 624 ಅಂಕಗಳು ಲಭಿಸಿದ್ದವು. ಇಂಗ್ಲಿಷ್ ವಿಷಯದಲ್ಲಿ ಈಕೆಗೆ 124 ಅಂಕಗಳನ್ನು ನೀಡಲಾಗಿತ್ತು. ಇಂಗ್ಲಿಷ್ ಪ್ರಶ್ನೆ ಪತ್ರಿಕೆಯಲ್ಲಿದ್ದ ಎಲ್ಲ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದರೂ ತನಗೆ ಒಂದು ಅಂಕ ಕಡಿಮೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ದಿವ್ಯಾ ಈ ವಿಷಯವನ್ನು ಶಾಸಕ ವಿಠ್ಠಲ ಹಲಗೇಕರ, ಬಿಇಒ ರಾಮಪ್ಪ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಅಲ್ಮೇಡಾ ಅವರ ಗಮನಕ್ಕೆ ತಂದಿದ್ದರು.

ಬಳಿಕ ಶಾಸಕ ಹಲಗೇಕರ ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳಿಗೆ ಈ ಸಂಗತಿ ಮುಟ್ಟಿಸಿದ್ದರು. ಇದೇ ಸಂದರ್ಭದಲ್ಲಿ ದಿವ್ಯಾ ಶಾಸಕರು ಮತ್ತು ಬಿಇಒ ಅವರ ಸಲಹೆಯಂತೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮರುಮೌಲ್ಯಮಾಪನದಲ್ಲಿ ದಿವ್ಯಾಳಿಗೆ ನ್ಯಾಯ ಸಿಕ್ಕಿದೆ ಎಂದು ಶಾಸಕ ಹಲಗೇಕರ ಹಾಗೂ ಬಿಇಒ ರಾಮಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-21-1954247983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.