ಮಡಿಕೇರಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು 2026 ರ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಶೇ 90ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಕಾಯಂ ನೌಕರರಾಗಿರಬೇಕು. https://powermedia.info ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲ್ಲೂಕು, ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬೇಕು.

ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾನಿಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ ಕಾಲೇಜಿನ ದೃಢೀಕೃತ ಅಂಕಪಟ್ಟಿ, ಸಂಘವು ನೀಡಿರುವ ನಮೂನೆಯಲ್ಲಿ ಕಚೇರಿ ಮುಖ್ಯಸ್ಥರ ದೃಢೀಕರಣ ಮತ್ತು ಶಾಖಾ ಸಂಘದ ದೃಢೀಕರಣ ಪತ್ರವನ್ನು ಅಪ್ಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ಮಾಹಿತಿಗೆ ದೂ:080-22354783/84 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಗಿರಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-602457145

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.