ಮಡಿಕೇರಿ: ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳಿಗೆ ಸಾಧನ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 22ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಲಿದೆ.

‘ಶಾಸಕ ಡಾ.ಮಂತರ್ಗೌಡ ಕಾರ್ಯಕ್ರಮ ಉದ್ಘಾಟಿಲಿದ್ದಾರೆ. ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಪೆರಿಗ್ರಿನ್ ಎಸ್.ಮಚಾಡೊ, ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಎಂ.ಡಿ.ರಂಗಸ್ವಾಮಿ’ ಭಾಗವಹಿಸಲಿದ್ದಾರೆ ಎಂದು ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.‘

ಕಳೆದ 14 ವರ್ಷಗಳ ಹಿಂದೆ ಕನ್ನಡ ವಿಷಯದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ನಾಣ್ಯ ನೀಡಿದೆವು. ಆನಂತರ ಪೂರ್ಣಾಂಕ ಪಡೆಯುವ ವಿದ್ಯಾರ್ಥಿಗಳು ಹೆಚ್ಚಾದರು. ಈಗ ಶೇ 100ರಷ್ಟು ಫಲಿತಾಂಶ ಪಡೆದ ಶಾಲೆಗಳನ್ನು ಅಭಿನಂದಿಸಲಾಗುತ್ತಿದೆ ಎಂದರು.

ಶಾಲೆಗಳ ಮುಖ್ಯಶಿಕ್ಷಕರು ಅಥವಾ ಶಾಲೆಯಿಂದ ಬರುವ ಪ್ರತಿನಿಧಿಗೆ ಸನ್ಮಾನ ಮಾಡಲಾಗುವುದು. ಜೊತೆಗೆ, 2 ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ವಿತರಿಸಲಾಗುವುದು ಎಂದರು.

ಕನ್ನಡ ಭಾಷೆ, ಸಾಹಿತ್ಯಕ್ಕಾಗಿ ಕನ್ನಡ ಸಿರಿ ಸ್ನೇಹ ಬಳಗ ಅವಿರತವಾಗಿ ದುಡಿಯುತ್ತಿದೆ. ಹಲವು ಕಾರ್ಯಕ್ರಮಗಳನ್ನು ಈ ಸಂಬಂಧ ಆಯೋಜಿಸಲಾಗಿದೆ. ಅದರ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಮುಖಂಡರಾದ ಕೆ.ಎಸ್.ರಮೇಶ್, ಧನಂಜಯ, ನಾಗರಾಜಶೆಟ್ಟಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-156302745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.