ಕೋಲಾರ: ಎಸ್ಎಸ್ಎಲ್ಸಿ ದ್ವಿತೀಯ ಭಾಷೆ ವಿಷಯದ ಪರೀಕ್ಷೆ ಬುಧವಾರ ನಡೆದಿದ್ದು, 198 ವಿದ್ಯಾರ್ಥಿಗಳು ಗೈರಾಗಿದ್ದರು. ಶೇ 98.94 ಹಾಜರಾತಿಯೊಂದಿಗೆ ಮೂರನೇ ಪರೀಕ್ಷೆಯೂ ಸುಸೂತ್ರವಾಗಿ ನಡೆದಿದೆ.

ಜಿಲ್ಲೆಯ 65 ಕೇಂದ್ರಗಳಲ್ಲಿ ನಡೆದ ಇಂಗ್ಲಿಷ್, ಉರ್ದು, ಕನ್ನಡ ಪರೀಕ್ಷೆಗೆ 18,761 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ 18,563 ಮಂದಿ ಹಾಜರಾಗಿದ್ದರು.

ಯಾವುದೇ ಕೇಂದ್ರದಲ್ಲಿ ಅವ್ಯವಹಾರ ನಡೆದ ಬಗ್ಗೆ ವರದಿಯಾಗಿಲ್ಲ. ಈ ವರೆಗಿನ ಮೂರೂ ಪರೀಕ್ಷೆಗಳು ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಯಶಸ್ವಿಯಾಗಿ ನಡೆದಿವೆ ಎಂದು ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್ ತಿಳಿಸಿದರು.

ಪರೀಕ್ಷಾ ಅವಧಿಯಲ್ಲಿ ವೆಬ್ ಕ್ಯಾಸ್ಟಿಂಗ್ ಮೂಲಕ ಅಧಿಕಾರಿಗಳು ನಿಗಾ ಇಟ್ಟಿದ್ದು ಯಾವುದೇ ಲೋಪ ಕಂಡು ಬಂದಿಲ್ಲ ಎಂದರು.

ಬಂಗಾರಪೇಟೆ ತಾಲ್ಲೂಕಿನ 8 ಕೇಂದ್ರಗಳಲ್ಲಿ ದ್ವಿತೀಯ ಭಾಷೆ ವಿಷಯಕ್ಕೆ 2,502 ಮಂದಿ ಹೆಸರು ನೋಂದಾಯಿಸಿದ್ದು, 20 ಮಂದಿ ಗೈರಾಗಿದ್ದರು. ಕೆಜಿಎಫ್ ತಾಲ್ಲೂಕಿನ 9 ಕೇಂದ್ರಗಳಲ್ಲಿ 3,249 ಮಕ್ಕಳು ಹೆಸರು ನೋಂದಾಯಿಸಿದ್ದು, 35 ಮಂದಿ ಪರೀಕ್ಷೆಗೆ ಬರಲಿಲ್ಲ.

ಕೋಲಾರ ತಾಲ್ಲೂಕಿನ 18 ಕೇಂದ್ರಗಳಲ್ಲಿ 4,741 ಮಂದಿ ಹೆಸರು ನೋಂದಾಯಿಸಿದ್ದು, 40 ಮಂದಿ ಗೈರಾಗಿದ್ದರು. ಮಾಲೂರು ತಾಲ್ಲೂಕಿನ 8 ಕೇಂದ್ರಗಳಲ್ಲಿ 2,901 ಮಂದಿ ನೋಂದಾಯಿಸಿದ್ದು, 25 ಮಂದಿ ಬರಲಿಲ್ಲ. ಮುಳಬಾಗಿಲು ತಾಲ್ಲೂಕಿನ 12 ಕೇಂದ್ರಗಳಲ್ಲಿ 2,816 ಮಂದಿ ನೋಂದಾಯಿಸಿದ್ದು, 57 ಮಂದಿ ಗೈರಾಗಿದ್ದರು. ಶ್ರೀನಿವಾಸಪುರ ತಾಲ್ಲೂಕಿನ 10 ಕೇಂದ್ರಗಳಲ್ಲಿ 2,552 ಮಂದಿ ನೋಂದಾಯಿಸಿದ್ದು, 21 ಮಂದಿ ಗೈರಾಗಿದ್ದರು.

ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು, ರಾಜ್ಯ ಜಾಗೃತದಳದವರು ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ವರೆಗೆ ನಿರ್ಬಂಧ ವಿಧಿಸಲಾಗಿತ್ತು.

ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಶಂಕರೇಗೌಡ, ಶಿಕ್ಷಣಾಧಿಕಾರಿ ವೀಣಾ, ಡಿವೈಪಿಸಿಗಳಾದ ರಾಜೇಶ್ವರಿ, ಸೈಹಿದಾ ನಾಹಿದಾ ಫಾತಿಮಾ, ಬಿಇಒಗಳಾದ ಮಧುಮಾಲತಿ ಪಡುವಣೆ, ಶಶಿಕಲಾ, ನಾರಾಯಣಸ್ವಾಮಿ, ಕೆಂಪಯ್ಯ, ರಾಮಚಂದ್ರ, ಮುನಿಲಕ್ಷ್ಮಯ್ಯ, ಎವೈಪಿಸಿ ಗಾಯತ್ರಿ, ವಿಷಯ ಪರಿವೀಕ್ಷಕರಾದ ಸಮೀವುಲ್ಲಾ, ಕ್ರಿಸ್ಟಿನಾಬಬಿತಾ, ತಾಲ್ಲೂಕು ನೋಡಲ್ ಅಧಿಕಾರಿ ಇಸಿಒ ರಾಧಾ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-18-70483205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.