ಕೋಲಾರ: ರಸ್ತೆ ಅಪಘಾತದಲ್ಲಿ ಕಾಲಿಗೆ ಗಂಭೀರವಾಗಿ ಗಾಯವಾದ ಕಾರಣ ಸ್ಟ್ರೆಚರ್ನಲ್ಲಿ ಬಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಕೆಜಿಎಫ್ ತಾಲ್ಲೂಕಿನ ಚೆನ್ನಾಗನಹಳ್ಳಿಯ ವಿದ್ಯಾರ್ಥಿನಿ ಎಸ್.ಕುಸುಮಾ ಇದೀಗ ಮತ್ತೆ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.

ಆ್ಯಂಡರ್ಸನ್ಪೇಟೆಯ ಸೇಂಟ್ ಮೇರೀಸ್ ಪ್ರೌಢಶಾಲೆಯ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆರವಿಗೆ ಧಾವಿಸಿರುವ ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಚರ್ಚಿಸಿದ್ದಾರೆ. ‘ತಂದೆ ಶಂಕರಪ್ಪ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದು, ಮಗಳ ಚಿಕಿತ್ಸೆಯ ಬಿಲ್ ಪಾವತಿಸಲು ಕಿಡ್ನಿ ಮಾರಾಟ ಮಾಡಲು ಮುಂದಾಗಿರುವ ವಿಚಾರ ತಿಳಿದು ಕಸಿವಿಸಿಯಾಯಿತು’ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ಆಸ್ಪತ್ರೆ ಆಡಳಿತ ಮಂಡಳಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಆಯುಕ್ತ, ಸಂಸದ ಪಿ.ಸಿ.ಮೋಹನ್ ಹಾಗೂ ಮುಖ್ಯಮಂತ್ರಿ ಮಾದ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಜೊತೆ ಮಾತನಾಡಿ, ವಿದ್ಯಾರ್ಥಿನಿಗೆ ಚಿಕಿತ್ಸೆ ವೆಚ್ಚ ಕೊಡಿಸುವ ಭರವಸೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-18-134169427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.