ಕೊಳ್ಳೇಗಾಲ: ವಾಸವಿ ಶಾಲೆಯ ವಿದ್ಯಾರ್ಥಿನಿ ರಾಜ್ಯದಲ್ಲಿ ದ್ವಿತೀಯ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುವುದು ನಮ್ಮ ಜಿಲ್ಲೆ ಮತ್ತು ತಾಲ್ಲೂಕಿಗೆ ಕೀರ್ತಿಯನ್ನು ತಂದಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ನಗರದ ವಾಸವಿ ಮಹಲ್ ನಲ್ಲಿ ಶನಿವಾರ ಶ್ರೀವಾಸವಿ ವಿದ್ಯಾ ಕೇಂದ್ರ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ವಾಸವಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಮ್ಮಿಕೊಂಡಿರುವುದು ಸಂತಸ ತಂದಿದೆ. ವಿದ್ಯಾರ್ಥಿಗಳು ಉನ್ನತ ಅಂಕಗಳನ್ನು ಪಡೆಯಲು ಶಿಕ್ಷಕರ ಪಾತ್ರ ಮಹತ್ವವಾಗಿರುತ್ತದೆ, ಅದೆ ರೀತಿ ವಿದ್ಯಾರ್ಥಿಗಳು ಕೂಡ ಶಿಕ್ಷಕರ ಭೋದನೆ ಕಡೆ ಗಮನ ಹರಿಸಿ ಹೆಚ್ಚಿನ ಪರಿಶ್ರಮವನ್ನು ಹಾಕಿ ಅಂಕಗಳನ್ನು ಪಡೆದು ಸಾಧನೆಗಳನ್ನು ಮಾಡಬೇಕು ಎಂದರು.

ಸಾಧನೆ ಎಂಬುದು ಸಾಧಕರ ಸ್ವತ್ತೆ ಹೊರತು ಸೋಮಾರಿಯ ಸ್ವತ್ತಲ್ಲ ಆದ್ದರಿಂದ ವಿದ್ಯಾರ್ಥಿಗಳು ಎಲ್ಲರು ಕೂಡ ಪರಸ್ಪರ ಪ್ರತಿ ವಿಶ್ವಾಸದಿಂದ ಸ್ನೇಹಭಾವದಿಂದ ಬೆರೆತು ಒಬ್ಬರಿಗೊಬ್ಬರು ಸಹಕಾರವನ್ನು ನೀಡುತ್ತ ಶಿಕ್ಷಕರ ಮಾರ್ಗದರ್ಶನಗಳನ್ನು ಪಡೆದು ಶೈಕ್ಷಣಿಕವಾಗಿ ಸಾಧನೆಗಳನ್ನು ಮಾಡಿದರೆ ಆ ಸಾಧನೆ ಮುಂದಿನ ಭವಿಷ್ಯಕ್ಕೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು.

ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿನಿಯೊಬ್ಬಳು ತನ್ನಂತೆ ಹೆಚ್ಚು ಅಂಕ ಪಡೆದ ತನ್ನ ಇಬ್ಬರು ಗೆಳತಿಯರಿಗೆ ಸಣ್ಣ ಉಡುಗೊರೆಯನ್ನು ಕೊಟ್ಟು ಆತ್ಮೀಯತೆಯನ್ನು ಮೆರೆದಳು. ಅದೆ ರೀತಿ ಎಲ್ಲಾ ವಿದ್ಯಾರ್ಥಿಗಳು ಒಬ್ಬರ ಸಾಧನೆಗೆ ಒಬ್ಬರು ನೆರವಾಗುತ್ತ, ಬದುಕಬೇಕು, ವಾಸವಿ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದು ಹೊರಹೊಮ್ಮಲು ತುಂಬಾ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ ರಾಜ್ಯಕ್ಕೆ ಕೊಡುಗೆ ಕೊಟ್ಟಿದ್ದಾರೆ ಎಂದರು.

ಬಿಇಒ ಮಂಜುಳಾ, ಆರ್ಯವೈಶ್ಯ ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎ.ಡಿ.ಕುಮಾರಕೃಷ್ಣ, ಕಾರ್ಯದರ್ಶಿ ಡಾ.ಪಿ.ಜಿ.ಶ್ರೀಧರ್, ಜಿಲ್ಲಾ ಆರ್ಯವೈಶ್ಯ ಸಂಘದ ಅಧ್ಯಕ್ಷ ಬಿ.ಕೆ.ಪ್ರಕಾಶ್, ಶಶಿಧರ್, ಚೇತನ್ , ಮುಖ್ಯ ಶಿಕ್ಷಕರು ಗೀತಾ ಹಾಗೂ ಪೋಷಕರು, ಮಕ್ಕಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-37-56781261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.