ಕೆ.ಆರ್.ನಗರ: ಸಾಮಾಜಿಕ ಜಾಲತಾಣಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಎರಡೂ ಸಂದೇಶಗಳು ಇದ್ದು, ಅವುಗಳಲ್ಲಿ ಕಲಿಕೆಗೆ ಪೂರಕವಾದ ಮತ್ತು ಉತ್ತಮ ಸಂದೇಶವನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಉತ್ತಮ ಫಲಿತಾಂಶ ಪಡೆದ ಶಾಲೆಗಳಿಗೆ, 600ಕ್ಕೂ ಹೆಚ್ಚು ಅಂಕ ಪಡೆದ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಳೆದ ಬಾರಿ ಜಿಲ್ಲೆಯಲ್ಲಿ ಕೊನೆಯ 9ನೇ ಸ್ಥಾನದಲ್ಲಿದ್ದ ಎಚ್.ಡಿ.ಕೋಟೆ ಈ ಬಾರಿ ಮೊದಲ ಸ್ಥಾನ ಪಡೆದಿದೆ. ಕಳೆದ ಬಾರಿ 6ನೇ ಸ್ಥಾನದಲ್ಲಿದ್ದ ಕೆ.ಆರ್.ನಗರ ಈ ಬಾರಿ ಕೇವಲ ಶೇ 1 ಅಂತರದಿಂದ 8ನೇ ಸ್ಥಾನಕ್ಕೆ ಕುಸಿದಿರುವುದು ಬೇಸರ ತಂದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಕೂಡ ಹೀಗೆ ಇರುತ್ತವೆ. ಒಂದೊಂದು ಅಂಕವೂ ಬಹಳ ಮುಖ್ಯವಾಗಿರುತ್ತದೆ. ಮೊದಲ ಸ್ಥಾನ ಪಡೆದಿರುವ ಎಚ್.ಡಿ.ಕೋಟೆ ಪ್ರೇರಣೆಯಾಗಿಟ್ಟುಕೊಂಡು 3ನೇ ಸ್ಥಾನದೊಳಗೆ ಬರಲು ಈಗಿನಿಂದಲೇ ಪ್ರಯತ್ನ ಹಾಕಬೇಕು’ ಎಂದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಉದಯಕುಮಾರ್ ಮಾತನಾಡಿ, ‘ಈ ಬಾರಿ ಜಿಲ್ಲೆಯಲ್ಲಿ ಯಾರೂ ಅನುತ್ತೀರ್ಣರಾಗಬಾರದು ಎಂದು ಪ್ರಯತ್ನ ಮಾಡಲಾಗಿತ್ತು. ರಾಜ್ಯದಲ್ಲಿ 625ಕ್ಕೆ 620 ಅಂಕ ಪಡೆದ 15ಸಾವಿರ ವಿದ್ಯಾರ್ಥಿಗಳಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 703ರಲ್ಲಿ 275 ಶಾಲೆಗಳು ಶೇ 100 ಫಲಿತಾಂಶ ನೀಡಿವೆ. ಮೈಸೂರು ಜಿಲ್ಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿರುವುದು ಹೆಮ್ಮೆಯ ವಿಚಾರ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ ಮಾತನಾಡಿ, ಈ ಬಾರಿ ತಾಲ್ಲೂಕಿಗೆ ಶೇ 92.81 ಫಲಿತಾಂಶ ಬಂದಿದ್ದು, ಕೇವಲ ಶೇ 1 ಅಂಕ ಕುಸಿ ತಾಲ್ಲೂಕು 8ನೇ ಸ್ಥಾನಕ್ಕೆ ಕುಸಿದಿದೆ. ಉನ್ನತ ಶ್ರೇಣಿಯಲ್ಲಿ 398, ಪ್ರಥಮ ಸ್ಥಾನದಲ್ಲಿ 1,200, ದ್ವಿತೀಯ ಸ್ಥಾನ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 194 ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ, ಮುಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವುದು ಅಲ್ಲದೇ ಜಿಲ್ಲೆಯಲ್ಲಿ 3ನೇ ಸ್ಥಾನದೊಳಗೆ ಬರಲು ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಕೆ.ಕೃಷ್ಣಯ್ಯ, ತಾಲ್ಲೂಕು ಪಂಚಾಯಿತಿ ಇಒ ಎನ್.ರವಿಕುಮಾರ್, ಬಿಆರ್ಸಿ ವೆಂಕಟೇಶ್ ಮಾತನಾಡಿದರು. ಇಒ ವಿ.ಪಿ.ಕುಲದೀಪ್, ಉಪ ನಿರ್ದೇಶಕರ ಕಚೇರಿ ವಿಷಯ ಪರಿವೀಕ್ಷಕರಾದ ಮೀನಾಕುಮಾರಿ ಪಾಟೀಲ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸ್ವಾಮಿಗೌಡ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಬಿ.ಕುಮಾರಸ್ವಾಮಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀಕಾಂತ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಕೆ.ಜಗದೀಶ್, ಇಸಿಒ ದಾಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎನ್.ಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-38-1749295241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.