ಕುಮಟಾ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ಊರಿನ ವಿದ್ಯಾರ್ಥಿಗಳಿಗೆ ತಾಲ್ಲೂಕಿನ ಹೊಳೆಗದ್ದೆಯ ಶಿಕ್ಷಕ ಹಾಗೂ ಬರಹಗಾರ ಪಿ.ಆರ್. ನಾಯ್ಕ ಅವರು ನಾಗಮ್ಮ ಪ್ರಕಾಶನ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿದ ಹಿರಿಯ ಪ್ರರ್ತಕರ್ತ ಜಿ.ಯು. ಭಟ್ಟ, `ಪಿ.ಆರ್. ನಾಯ್ಕ ಅವರು ತಮ್ಮ ತಾಯಿ ಹೆಸರಿನಲ್ಲಿ ಸ್ಥಾಪಿಸಿರುವ ನಾಗಮ್ಮ ಪ್ರಕಾಶನ ಸಂಸ್ಥೆಯಿಂದ ಪುಸ್ತಕ ಪ್ರಕಾಶನದ ಜೊತೆಗೆ ಊರಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಮುದಾಯ ನೆರವಿಗೆ ಮಾದರಿಯಾಗಿದೆ’ ಎಂದು ಹೇಳಿದರು.

‘ಇದರ ಪ್ರಯೋಜನ ಪಡೆದು ವಿದ್ಯಾರ್ಥಿಗಳು ಇನ್ನಷ್ಟು ಎತ್ತರದ ಸಾಧನೆ ಮಾಡಲಿ’ ಎಂದು ಹಾರೈಸಿದರು.

ಪಿ.ಆರ್. ನಾಯ್ಕ ಮಾತನಾಡಿ, ‘ನಾಗಮ್ಮ ಪ್ರಕಾಶನ ಮೂಲಕ ಹಲವು ಹಿರಿಯ ಹಾಗೂ ಉದಯೋನ್ಮುಖ ಲೇಖಕರ ಪುಸ್ತಕಗಳನ್ನು ಪ್ರಕಟಿಸಿದೆ. ಊರಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಿ.ಆರ್. ನಾಯ್ಕ ಅವರ ತಾಯಿ ನಾಗಮ್ಮ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಪದಾಧಿಕಾರಿ ಸುರೇಶ ನಾಯ್ಕ, ಸಂಘದ ಹೊನ್ನಾವರ ತಾಲ್ಲೂಕು ಸಂಘದ ಅಧ್ಯಕ್ಷ ಸುಧೀಶ ನಾಯ್ಕ, ಸ್ಥಳೀಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಟಿ. ನಾಯ್ಕ, ಉದ್ಯಮಿ ಸಚಿನ್ ನಾಯ್ಕ, ಪ್ರಾಧ್ಯಾಪಕ ಸುರೇಶ ಹೆಗಡೆ, ಶಿಕ್ಷಕ ಯೋಗೇಶ ಪಟಗಾರ ಪಾಲ್ಗೊಂಡಿದ್ದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರು ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-20-703101880

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.