ಕುಮಟಾ: ‘ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಇಲ್ಲಿಯ ಶಿಕ್ಷಣ ಹಾಗೂ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಹಾಗೂ ಶಿಕ್ಷಕರು ಗೌರವಿಸುವ ಉತ್ತಮ ಸಂಪ್ರದಾಯ ಆರಂಭಿಸುತ್ತಿರುವುದು ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಮಹತ್ವದ ಹೆಜ್ಜೆ’ ಎಂದು ಶಿಕ್ಷಣ ಇಲಾಖೆಯ ಧಾರವಾಡದ ಆಯುಕ್ತರ ಕಚೇರಿಯ ನಿರ್ದೇಶಕ ಈಶ್ವರ ನಾಯ್ಕ ಹೇಳಿದರು.

ಇಲ್ಲಿಯ ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಹಾಗೂ ಶಿಕ್ಷರು ಸ್ವಯಂ ಪ್ರೇರಣೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಅರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಕೀರ್ತಿ ತರುತ್ತಿದ್ದಾರೆ. ಇದಕ್ಕೆ ಕಾರಣ ವಿದ್ಯಾರ್ಥಿಗಳಿಗೆ ಶಿಕ್ಷಕರು ನೀಡುವ ಅತ್ಯುತ್ತಮ ಶೈಕ್ಷಣಿಕ ಮಾರ್ಗದರ್ಶನವೇ ಆಗಿದೆ. ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಪರಿಶ್ರಮವನ್ನು ಗುರುತಿಸಿ ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆಯ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ಗೌರವಿಸುವುದು ವಿಶೇಷ. ಇದನ್ನು ಹೆಚ್ಚಿನ ಶಿಕ್ಷಣ ಸಂಸ್ಥೆಗಳು ಮಾದರಿಯಾಗಿ ಅನುಸರಿಸಬೇಕು’ ಎಂದರು.

ಸಂಸ್ಥೆಯ ಪ್ರಾಚಾರ್ಯ ಎನ್.ಆರ್. ಹೆಗಡೆ, ‘ಮೊದಲ ಬಾರಿಗೆ ಸಂಸ್ಥೆಯ ಶಿಕ್ಷಕರು ಸಾಧಕ ವಿದ್ಯಾರ್ಥಿಗಳನ್ನು ಗೌರವಿಸುತ್ತಿರುವುದಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗಿದೆ. ಈ ಪರಂಪರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಅರ್ಪಣಾ ಮನೋಭಾವ ಬೆಳೆಸಲು ಸಹಕಾರಿ’ ಎಂದರು.

ಎಸ್.ಎಸ್.ಎಲ್.ಸಿಯಲ್ಲಿ ಜಿಲ್ಲೆಗೆ ಹೆಚ್ಚು ಅಂಕ ಪಡೆದ ಡಾ.ಎ.ವಿ.ಬಾಳಿಗಾ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ದಿಶಾಂತ ನಾಯ್ಕ, ಕುಮಟಾ ಸಿ.ವಿ.ಎಸ್.ಕೆ ಪ್ರೌಢಶಾಲೆಯ ರಾಘವ ಹೆಗಡೆ, ಭಟ್ಕಳ ತಾಲ್ಲೂಕಿನ ತೆರನಮಕ್ಕಿಯ ಕರ್ನಟಕ ಪಬ್ಲಿಕ್ ಶಾಲೆಯ ಸಾನಿಕಾ ಬೈಲೂರು, ವರ್ಷಿತಾ ನಾಯ್ಕ, ಆನಂದಾಶ್ರಮ ಪ್ರೌಢ ಶಾಲೆಯ ಪ್ರಥಮ ನಾಯ್ಕ, ಶಿರಾಲಿಯ ವೈಭವಿ ನಾಯಕ ಅವರನ್ನು ಗೌರವಿಸಲಾಯಿತು.

ಬಿ.ಇ.ಒ ಉದಯ ನಾಯ್ಕ, ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಜಿ.ಎಸ್. ಭಟ್ಟ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಾದ ಭಾರತಿ ನಾಯ್ಕ, ಉಪನ್ಯಾಸಕರಾದ ಶಿವಾನಂದ ನಾಯ್ಕ, ನಾಗರಾಜ ಗೌಡ, ಚಂದ್ರಹಸ ರಾಯ್ಕರ್, ವಿದ್ಯಾರ್ಥಿ ಪಾಲಕ ಉಲ್ಲಾಸ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-20-1334502132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.