ಕುಂದಾಪುರ: ಇಲ್ಲಿನ ಶ್ರೀವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನ್ವರ್ಥ್ ಪೂಜಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾನೆ.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅನ್ವರ್ಥ್, ‘622 ಅಂಕ ಬರಬಹುದೆಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಪರೀಕ್ಷೆ ಇಲ್ಲದಾಗಲೂ ಪ್ರತಿದಿನ ಬೆಳಿಗ್ಗೆ ಒಂದುವರೆ ಗಂಟೆ, ಸಂಜೆ 2ರಿಂದ 3 ಗಂಟೆ ಓದುತ್ತಿದ್ದೆ. ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಎಲ್ಲ ರೀತಿಯ ಪ್ರೋತ್ಸಾಹ ನೀಡಿದ್ದಾರೆ. ಮುಂದೆ ಎಂಜಿನಿಯರ್ ಆಗುವ ಆಸೆ ಇದ್ದು, ಪಿಯುಸಿಯಲ್ಲಿ ವಿಜ್ಞಾನ ವಿಷಯ ಆರಿಸಿಕೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.

ಅನ್ವರ್ಥ್ ಅವರ ತಂದೆ ಅಶೋಕ್ ಎಸ್. ಪೂಜಾರಿ ಬೆಂಗಳೂರಿನಲ್ಲಿ ಹೋಟೆಲ್ ಉದ್ಯೋಗಿ ಹಾಗೂ ತಾಯಿ ಸುಮಿತ್ರಾ ಗೃಹಿಣಿಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-28-1678251039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.