ಲಿಂಗಸುಗೂರು: ‘ಶಿಕ್ಷಕರ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಂಘಟಿತ ಪರಿಶ್ರಮದಿಂದಲೇ ಈ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸಾಧನೆ ಮಾಡಿದೆ’ ಎಂದು ಡಿಡಿಪಿಐ ಕೆ.ಡಿ. ಬಡಿಗೇರ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ತಾಲ್ಲೂಕು ಘಟಕ ಶುಕ್ರವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಕಳೆದ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಬಂದಿತ್ತು. ಇದನ್ನೇ ಸವಾಲಾಗಿ ಸ್ವೀಕರಿಸಿಕೊಂಡು, ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಸೂಚಿಸಿದ ಹಲವು ಕಾರ್ಯಕ್ರಮಗಳ ಜೊತೆಗೆ ಸ್ಥಳೀಯವಾಗಿ ಶಿಕ್ಷಕರು ಕಾರ್ಯಕ್ರಮಗಳನ್ನು ಜಾರಿಗೊಳಿಸಿ, ಉತ್ತಮ ಫಲಿತಾಂಶಕ್ಕಾಗಿ ಜಿಲ್ಲೆಯ ಶಿಕ್ಷಕರ ತಂಡ ಅವಿರತ ಶ್ರಮವಹಿಸಿದೆ’ ಎಂದರು.

‘ಫಲಿತಾಂಶದಲ್ಲಿ ಈ ಬಾರಿ ಜಿಲ್ಲೆಗೆ 21ನೇ ಸ್ಥಾನ ದೊರಕಿರುವುದು ಸಂತಸ ತಂದಿದೆ. ಶಿಕ್ಷಕರ, ಮುಖ್ಯ ಶಿಕ್ಷಕರ ಸಂಘಟಿತ ಹಾಗೂ ಅವಿರತ ಪರಿಶ್ರಮವು ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸಿದೆ’ ಎಂದು ಹೇಳಿದರು.

‘ಮಾನ್ವಿಯ ಸುಖದೇವ 625ಕ್ಕೆ 625 ಅಂಕಗಳಿಸಿ, ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಜಿಲ್ಲೆಯ ಬಹಳಷ್ಟು ಶಾಲೆಗಳು ಶೇ 90ರಷ್ಟು ಫಲಿತಾಂಶ ಪಡೆದಿರುವುದರಿಂದ ನಮ್ಮೆಲ್ಲರ ಪರಿಶ್ರಮಕ್ಕೆ ಗೌರವ ದೊರೆತಂತಾಗಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-32-694964871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.