ಹಲಗೂರು: ಮಂಡ್ಯ ಜಿಲ್ಲಾಡಳಿತ ಮತ್ತು ಮಳವಳ್ಳಿ ತಾಲ್ಲೂಕು ಕ್ಷೇತ್ರ ಶಿಕ್ಷಣ ಅಧಿಕಾರಿ ನಿರಂತರ ಮಾರ್ಗದರ್ಶನ ನೀಡಿದ ಪ್ರತಿಫಲವಾಗಿ ಜಿಲ್ಲೆಗೆ ಮತ್ತು ನಮ್ಮ ಶಾಲೆಗೆ ಉತ್ತಮ ಫಲಿತಾಂಶ ಲಭಿಸಿದೆ ಎಂದು ಪ್ರಾಂಶುಪಾಲೆ ಲಲಿತಾಂಭ ಸೋಮಶೇಖರ್ ಸ್ಮರಿಸಿದರು.

ಹಲಗೂರಿನ ಜೆ.ಜೆ.ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಪೋಷಕರಾದ ಟಿ.ಆರ್.ರಕ್ಷಿತಾ ಮಾತನಾಡಿ, ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಧಣಿವರಿಯದ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರಕಿದೆ ಎಂದು ಶ್ಲಾಘಿಸಿದರು.

ಶಿಕ್ಷಕರು ಮತ್ತು ಪೋಷಕರ ಸಹಕಾರದಿಂದ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗಿದೆ. ಜಿಲ್ಲೆಗೆ ಮೊದಲ ಸ್ಥಾನ ಲಭಿಸಿರುವುದು ಖುಷಿ ತಂದಿದೆ ಎಂದು ಟಿ.ಅರ್. ಚಂದುಶ್ರೀ ಹೇಳಿದರು.

ವಳ್ಳಳ್ಳಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ.ಜೆ.ಸೋಮಶೇಖರ್, ಸಂಯೋಜಕ ವಿಕಾಶ್, ಮುಖ್ಯ ಶಿಕ್ಷಕಿ ಶಿವಮಣಿ, ಶಿಕ್ಷಕರಾದ ಸೀಮಾ, ಮಧು, ಸುಮಂತ್, ವಿವೇಕ್, ರಂಜಿತಾ, ಸುಮಿತ್ರ, ತೇಜಶ್ವಿನಿ,, ಸೌಮ್ಯ, ಸ್ಪೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-40-1287552980

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.