ಮಂಡ್ಯ: ಮೇ 18ರಿಂದ ಮೇ 25ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 1813 ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆಯಲಿದ್ದಾರೆ. ಜಿಲ್ಲೆಯಲ್ಲಿ 8 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಿಸಬೇಕು. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆ ಸಾಗಿಸುವಾಗ ಬಿಗಿ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಿರಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಪೂರಕ ಪರೀಕ್ಷೆ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಗಳಿಗೆ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸ್ಮಾರ್ಟ್ ಡಿವೈಸ್ ಕೊಠಡಿಗೆ ತರಲು ಬೀಡಬೇಡಿ ಎಂದು ಸೂಚಿಸಿದರು.

ಡಿಡಿಪಿಐ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯಾ ಮತ್ತು ಮಹಾದೇವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-1704114659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.