ಮೂಡಲಗಿ: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ನಾಗನೂರ ಚೈತನ್ಯ ಆಶ್ರಮ ಇಂಗ್ಲಿಷ್ ಮಾಧ್ಯಮ ಶಾಲೆಯ ವಿವೇಕ ಹಾಲಪ್ಪ ಸುಳ್ಳನವರ ಶೇ 99.84 ಅಂಕ ಪಡೆದು ರಾಜ್ಯಕ್ಕೆ 2ನೇ ಸ್ಥಾನ ಹಾಗೂ ಮೂಡಲಗಿ ವಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.

ಅದೇ ಶಾಲೆಯ ಸುಚಿತ್ರಾ ಬಿ.ಎಸ್. ಹಾಗೂ ಅರಭಾವಿಯ ಸತ್ತಿಗೇರಿ ತೋಟದ ದಾನೇಶ್ವರ ಪ್ರೌಢಶಾಲೆಯ ಕಾವೇರಿ ವಿಠ್ಠಲ ಅರಭಾವಿ ಶೇ 99.36 ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನ, ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾನೆ. ಶಿವಾಪುರ (ಹ)ದ ವೈ.ಬಿ. ಅಡಿಹುಡಿ ಸರ್ಕಾರಿ ಪ್ರೌಢಶಾಲೆಯ ಅಮೃತಾ ಶಿವಲಿಂಗ ನುಚ್ಚುಂಡಿ ಹಾಗೂ ಮಲ್ಲಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೆವಕಿ ಮಹಾಂತೇಶ ಹಾಗೂ ರಾಜಾಪುರದ ಸರ್ಕಾರಿ ಪ್ರೌಢಶಾಲೆಯ ರೇವಪ್ಪ ಸಿದ್ದಪ್ಪ ಜೋಕಾನಟ್ಟಿ ಶೇ 99.20 ಅಂಕ ಪಡೆದು ರಾಜ್ಯಕ್ಕೆ 6ನೇ ಸ್ಥಾನ ಹಾಗೂ ವಲಯಕ್ಕೆ ಮೂರನೇ ಸ್ಥಾನ ಪಡೆದಿದ್ದಾನೆ. ಚೈತನ್ಯ ಶಾಲೆಯ ದೇವಕಿ ಬಚ್ಚನ್ನವರ ಶೇ 99.04 ಅಂಕ ಪಡೆದು ವಲಯಕ್ಕೆ 4ನೇ ಸ್ಥಾನ ಪಡೆದಿದ್ದಾನೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ ತಿಳಿಸಿದ್ದಾರೆ. 170 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕಗಳನ್ನು, 1,422 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಲಯ ವ್ಯಾಪ್ತಿಯಲ್ಲಿ ಒಟ್ಟು 28 ಶಾಲೆಗಳು ಶೇ 100ರಷ್ಟು ಫಲಿತಾಂಶ ದಾಖಲಿಸಿವೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-21-189363972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.