ಭಾಲ್ಕಿ: ತಾಲ್ಲೂಕಿನ ಕೋನಮೇಳಕುಂದಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ100ರಷ್ಟು ಫಲಿತಾಂಶ ಲಭಿಸಿದೆ ಎಂದು ಪ್ರಾಚಾರ್ಯ ರೇವಣಸಿದ್ದಪ್ಪ ಚಕ್ರಕರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳಾದ ಆದಿತ್ಯ ಉಮೇಶ ಮತ್ತು ಸುಮಿತ್ ಶ್ಯಾಮ್ ಶೇ 96.32ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿ ಭವಾನಿ ಗೋಪಾಲರೆಡ್ಡಿ ಶೇ 95.68ರಷ್ಟು ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಪರೀಕ್ಷೆಗೆ ಹಾಜರಾದ ಒಟ್ಟು 35 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 7 ಅಗ್ರಶ್ರೇಣಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿ ಶಾಲೆಗೆ ಕೀರ್ತಿ ತಂದು ಕೊಟ್ಟಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೇಶ್ ಎಸ್.ಬಿ, ಜಿಲ್ಲಾ ಸಮನ್ವಯಧಿಕಾರಿ ಶರಣಪ್ಪ ಬಿರಾದಾರ, ಸೇರಿದಂತೆ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-33-375682890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.