ಮುಳಗುಂದ: ‘ಸಾಧನೆಗೆ ಮೊದಲು ಪ್ರಯತ್ನ ಬೇಕು. ಪ್ರಯತ್ನವೇ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸತತ ಅಧ್ಯಯನ, ಪರಿಶ್ರಮದಿಂದ ಯಶಸ್ಸು ಸಾಧ್ಯ’ ಎಂದು ಆರ್.ಎನ್. ದೇಶಪಾಂಡೆ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ. ಕಲ್ಲನಗೌಡರ ಹೇಳಿದರು.

ಇಲ್ಲಿನ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿ ವತಿಯಿಂದ ಸೋಮವಾರ ನಡೆದ ಹಾಲುಮತ ಸಮಾಜದ ಎಸ್.ಎಸ್.ಎಲ್.ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

‘ಜಾಗೃತಗೊಂಡರೆ ಇಡೀ ಸಮಾಜ ಅಭಿವೃದ್ಧಿ ಸಾಧಿಸುವುದರಲ್ಲಿ ಸಂದೇಹವಿಲ್ಲ. ಯಾವಾಗಲೂ ಕ್ರಿಯಾಶೀಲರಾಗಿರಬೇಕು. ಜೀವನದಲ್ಲಿ ಮೌಲ್ಯ, ಕೌಶಲಗಳನ್ನು ಅಳವಡಿಸಿಕೊಳ್ಳಬೇಕು. ಜಗತ್ತಲ್ಲಿ ಜ್ಞಾನಕ್ಕಿಂತ ದೊಡ್ಡದು ಯಾವುದೂ ಇಲ್ಲ’ ಎಂದರು.

ಸಾನ್ನಿಧ್ಯ ವಹಿಸಿದ್ದ ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಮಾತನಾಡಿದರು.

ವೈದ್ಯ ಎಸ್.ಸಿ. ಚವಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಆರ್ಟಿಒ ಅಧಿಕಾರಿ ಬಿ.ಡಿ. ಹರ್ತಿ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನ ಗೌರವಿಸಲಾಯಿತು.

ಹಾಲುಮತ ಸಮಾಜದ ಗುರು ಫಕ್ಕೀರಯ್ಯ ಅಮೋಘಿಮಠ, ಮುಖಂಡರಾದ ಮಹಾಂತೇಶ ನೀಲಗುಂದ, ಮಲ್ಲಪ್ಪ ಕುಂದಗೋಳ, ಬಸವರಾಜ ಬಡ್ನಿ, ಬಿ.ವಿ.ಸುಂಕಾಪುರ, ಅಶೋಕ ಹುಣಸಿಮರದ, ಬಸವರಾಜ ಹಾರೋಗೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-23-1478480411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.