ಮೈಸೂರು: ನಗರದ ಶಿಕ್ಷಕರ ಬಡಾವಣೆಯಲ್ಲಿರುವ ಆಜಾದ್ ನ್ಯಾಷನಲ್ ನರ್ಸರಿ, ಪ್ರಾಥಮಿಕ ಶಾಲೆ ಮತ್ತು ಮೌಲಾನಾ ಆಜಾದ್ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 99ರಷ್ಟು ಫಲಿತಾಂಶ ಪಡೆದಿದ್ದು, ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುವಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಶಾಲೆಯ ಸಾಯಿ ಭರತ್ (572 ಅಂಕ), ನಿತಿನ್ ನಾರಾಯಣ್ (530) ಹಾಗೂ ಸಿಂಧುಶ್ರೀ (513) ಅವರನ್ನು ಶಾಲೆ ಆಡಳಿತ ಮಂಡಳಿ ಪರವಾಗಿ ಅಭಿನಂದಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಜಾಕೀರ್ ಹುಸೇನ್ ‘ ಶಾಲೆಯು ಸಮಗ್ರ ಶಿಕ್ಷಣ, ಸೃಜನಶೀಲತೆ, ಬಲವಾದ ಶೈಕ್ಷಣಿಕ ಅಡಿಪಾಯ, ಶಿಸ್ತು ಮತ್ತು ಭವಿಷ್ಯದ ಸವಾಲುಗಳಿಗೆ ವಿದ್ಯಾರ್ಥಿಗಳನ್ನು ಸಬಲರನ್ನಾಗಿ ಮಾಡುವ ಉದ್ದೇಶ ಹೊಂದಿದೆ’ ಎಂದು ಹೇಳಿದರು.

ಕಾತ್ಯಾಯಿನಿ ಯಶೋಮತಿ, ‘ಡೆಕ್ಕನ್ ಹೆರಾಲ್ಡ್’ ಮೈಸೂರು ಬ್ಯುರೊ ಮುಖ್ಯಸ್ಥ ಟಿ.ಆರ್. ಸತೀಶ್ಕುಮಾರ್, ಸಂಸ್ಥೆಯ ಕಾರ್ಯದರ್ಶಿ ಫಾಹೀನ್ ಹುಸೇನ್ , ಮುಖ್ಯ ಶಿಕ್ಷಕ ಸಾದಿಕ್ ಉರ್ ರೆಹನಾ, ಆಡಳಿತಾಧಿಕಾರಿ ಮನ್ಸೂರ್ ಅಹಮದ್ ಖಾನ್, ಶಿಕ್ಷಕರಾದ ಭವ್ಯಾ, ಶಿವಮ್ಮ, ತನುಶ್ರೀ, ಮೈಕ್ ಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-39-1900616301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.