ಮೈಸೂರು: ‘ಮಕ್ಕಳ ಬದುಕು ರೂಪಿಸುವಲ್ಲಿ ಪೋಷಕರ ಶ್ರಮ ಸ್ಮರಣೀಯ’ ಎಂದು ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.

ಜೆ.ಎಸ್. ಜಗದೀಶ್ ಸ್ನೇಹ ಬಳಗದ ವತಿಯಿಂದ ಇಲ್ಲಿನ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಶನಿವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಪಾಲಕರು ಮಕ್ಕಳಿಗೆ ಕಷ್ಟದ ಬಗ್ಗೆ ತಿಳಿಸಬೇಕು. ನೋವಿನ ಪರಿಚಯವಿದ್ದರೆ ಗೆಲುವು ಹೆಚ್ಚು ಸಿಹಿಯಾಗಿರುತ್ತದೆ’ ಎಂದರು.

ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ.ವಿನಯ್ಕುಮಾರ್, ‘ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಅನೇಕ ಅವಕಾಶ ಇದೆ. ಒಂದೇ ಕ್ಷೇತ್ರದಲ್ಲೇ ಸಾಧನೆ ಮಾಡಬೇಕೆಂದಿಲ್ಲ. ನಿಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಿ’ ಎಂದು ಸಲಹೆ ನೀಡಿದರು.

ನಗರಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್, ‘15 ವರ್ಷದಿಂದ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕೆಲಸ ಮಾಡುತ್ತಿದ್ದೇವೆ. ಈವರೆಗೆ 2 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಅಭಿನಂದಿಸಿದ್ದೇವೆ’ ಎಂದರು.

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ300ಕ್ಕೂ ಹೆಚ್ಚು ಮಕ್ಕಳನ್ನು ಪುರಸ್ಕರಿಸಲಾಯಿತು.

ವೈದ್ಯೆ ಡಾ.ಯಶಸ್ವಿನಿ ಸಂಜಯ್, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಮುಖಂಡರಾದ ಆಯರಹಳ್ಳಿ ವಿರೂಪಾಕ್ಷ, ಲೋಹಿತ್ ಶರ್ಮ, ಶ್ರೀನಿವಾಸ್, ಸತ್ಯಾನಂದ ವಿಟ್ಟು, ಪ್ರಸನ್ನಕುಮಾರ್, ಮೋಹನ್, ರಘು, ರವಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-39-704674671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.