ಮೈಸೂರು: ‘ಗೃಹಲಕ್ಷ್ಮಿ’ ಯೋಜನೆಯ ಹಣದ ಸಹಾಯದಿಂದ ಎಸ್ಎಸ್ಎಲ್ಸಿಯಲ್ಲಿ ಚೆನ್ನಾಗಿ ಓದಿ 624 ಅಂಕ ಪಡೆದ ವಿದ್ಯಾರ್ಥಿನಿ ಮಾಧುರಿ ಆರ್. ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ನಿರ್ದೇಶನದಂತೆ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿನಿಯ ನಿವಾಸಕ್ಕೆ ಭೇಟಿ ನೀಡಿ, ಸಿಹಿ ಹಂಚಿ ಅಭಿನಂದಿಸಿದರು.

ಮಾಧುರಿ ಅವರ ಸಾಧನೆಯ ಹಿಂದೆ ಕುಟುಂಬದ ಪರಿಶ್ರಮದ ಜೊತೆಗೆ ಅವರ ತಾಯಿ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಯಾಗಿದ್ದು, ಆರ್ಥಿಕ ಸಹಾಯ ಮಗಳ ವಿದ್ಯಾಭ್ಯಾಸದ ಅಗತ್ಯಗಳಿಗೆ ಬಳಸಿಕೊಂಡು ಸದುಪಯೋಗ ಪಡಿಸಿಕೊಂಡಿದ್ದಾರೆ. ಈ ಮೂಲಕ ಸರ್ಕಾರದ ಯೋಜನೆಗಳು ಸರಿಯಾದ ಫಲಾನುಭವಿಗಳ ಕೈ ಸೇರಿದಾಗ ಸಮಾಜದಲ್ಲಿ ಹೇಗೆ ಸಕಾರಾತ್ಮಕ ಬದಲಾವಣೆ ತರಬಹುದು ಎಂಬುದಕ್ಕೆ ಈ ಕುಟುಂಬ ಮಾದರಿಯಾಗಿದೆ.

‘ಸರ್ಕಾರದ ಯೋಜನೆಗಳು ಅರ್ಹರ ಕೈಸೇರಿದಾಗ ಇಂತಹ ಅಮೋಘ ಸಾಧನೆಗಳು ಸಾಧ್ಯವಾಗುತ್ತವೆ. ಮಾಧುರಿ ಆರ್. ಅವರ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ’ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ.

ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹದೇವು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಬ್ಬಯ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-785027043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.