ನರಸಿಂಹರಾಜಪುರ: ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಂಗ್ಲ ಮಾಧ್ಯಮ ವಿಭಾಗ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದ್ದು, ಕನ್ನಡ ಮತ್ತು ಆಂಗ್ಲ ಮಾಧ್ಯಮ ಸೇರಿ ಶೇ 89 ಫಲಿತಾಂಶ ಲಭಿಸಿದೆ.

ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಬರೆದ 51 ವಿದ್ಯಾರ್ಥಿಗಳಲ್ಲಿ, 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟು ಪರೀಕ್ಷೆ ಬರೆದ 72 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಜಿ. ಭುವನೇಶ್ವರಿ 607 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬಿ.ಎಸ್. ಛಾಯ 601 ಅಂಕ ಪಡೆದು ದ್ವಿತೀಯ ಹಾಗೂ ಮರೀಯಂ ಬೇಗ್ 591 ಅಂಕ ಪಡೆದು ತೃತೀಯ ಸ್ಥಾನ ಗಳಿಸಿದ್ದಾರೆ. ಇಂಗ್ಲಿಷ್ನಲ್ಲಿ ಬಿ.ಎಸ್. ಛಾಯ ಪೂರ್ಣಾಂಕ ಪಡೆದುಕೊಂಡಿದ್ದಾರೆ. ಕನ್ನಡದಲ್ಲಿ 5 ವಿದ್ಯಾರ್ಥಿಗಳು ಪೂರ್ಣಾಂಕ, ಹಿಂದಿಯಲ್ಲಿ ಮಿಸ್ಬಾ ಖಾನಂ ಪೂರ್ಣಾಂಕ ಹಾಗೂ ಆಟೋಮೊಬೈಲ್ ವಿಷಯದಲ್ಲಿ ಮೂವರು ವಿದ್ಯಾರ್ಥಿಗಳು ಪೂರ್ಣಾಂಕ ಪಡೆದುಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-126-1316092245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.