ರಾಯಬಾಗ: ಎಸ್ಎಸ್ಎಲ್ಸಿ ಪರೀಕ್ಷೆಯ ಹಾಲ್ ಟಿಕೆಟ್ ವಿತರಣೆಯಲ್ಲಿ ಉಂಟಾದ ಗೊಂದಲಕ್ಕೆ ಸಂಬಂಧಿಸಿದಂತೆ ಮೊರಬ ಗ್ರಾಮದ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಅಜೀತ ಬಾನೆ ಅನುದಾನರಹಿತ ಪ್ರೌಢ ಶಾಲೆ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಕೆಲವು ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡದೆ ತಡೆಹಿಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೀಡಾಗಿತ್ತು. ವಿಷಯ ತಿಳಿದ ತಕ್ಷಣ ತಹಶೀಲ್ದಾರ್ ಮಹಾದೇವ ಸನಮುರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್. ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ, ತಕ್ಷಣ ಹಸ್ತಕ್ಷೇಪ ಮಾಡಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸಿದರು.

ಈ ನಡುವೆ ವಿಷಯವನ್ನು ಪ್ರಶ್ನಿಸಿದ ಪಾಲಕರು ಹಾಗೂ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಶಾಲಾ ಆಡಳಿತ ನೋಟಿಸ್ ಜಾರಿ ಮಾಡಿದ್ದಾರೆ.

ಪಾಲಕರಾದ ಅಕ್ಷತಾ ವಾಘಮೋಡೆ, ಚೇತನ ಮಂಟೂರ ಸೇರಿದಂತೆ ಸುದ್ಧಿ ಬಿತ್ತರಿಸಿದ್ದ ಐವರು ಪತ್ರಕರ್ತರಿಗೆ ನೋಟಿಸ್ ನೀಡಲಾಗಿದೆ.

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ನೀಡಿ ಪರೀಕ್ಷೆಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಪಾಲಕರಿಗೆ ನೋಟಿಸ್ ನೀಡಿರು ವುದು ನನ್ನ ಗಮನಕ್ಕೆ ಬಂದಿಲ್ಲ. ಇದು ಅವರ ವೈಯಕ್ತಿಯ ಭಿನಾಭಿಪ್ರಾಯಗಳಿರಬಹುದು. ನಾನು ತಲೆ ಹಾಕಲು ಬರುವುದಿಲ್ಲ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-21-2100655957

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.