ರಾಯಚೂರು: ‘ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಎಲ್ಲರೂ ಶ್ರಮ ಹಾಕಿದ್ದಾರೆ. ಇಡೀ ರಾಜ್ಯವೇ ರಾಯಚೂರು ಕಡೆ ನೋಡುವ ಹಾಗೆ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಸರಿಯಾದ ರೂಪುರೇಷೆ ಸಿದ್ಧಪಡಿಸಿದ್ದರಿಂದ ಉತ್ತಮ ಫಲಿತಾಂಶ ಬಂದಿದೆ’ ಎಂದು ತಹಶೀಲ್ದಾರ್ ಸುರೇಶ ವರ್ಮಾ ಹೇಳಿದರು.

ಇಲ್ಲಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಭಾರತ ಜ್ಞಾನ ವಿಜ್ಞಾನ ಸಮಿಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ತಾಲ್ಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶೇ100 ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದುಳಿದ ಪ್ರದೇಶ ಎಂದು ಕರೆಸಿಕೊಳ್ಳುತ್ತಿದ್ದ ರಾಯಚೂರು ಇಂದು ಫಲಿತಾಂಶದಿಂದ ಮುಂದುವರಿದ ಪ್ರದೇಶವಾಗಿದೆ. ಸರಿಯಾದ ರೂಪುರೇಷೆ ಸಿದ್ಧಪಡಿಸಿದ್ದರಿಂದ ಉತ್ತಮ ಫಲಿತಾಂಶ ಬಂದಿದೆ. ಶಾಲೆಯ ಮುಖ್ಯಗುರುಗಳಿಗೆ ತರಬೇತಿ ನೀಡಲಾಗಿತ್ತು. ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡಲಾಗಿತ್ತು. ನಮ್ಮ ಭಾಗದ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದೆ, ಸಾಧನೆಗೆ ವಿದ್ಯಾರ್ಥಿಗಳು ಕಷ್ಟಪಡಬೇಕು ಎಂದು ಕಿವಿಮಾತು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ, ಶಿಕ್ಷಕರು, ಪೋಷಕರು ಸಹಿತ ಎಲ್ಲರೂ ಫಲಿತಾಂಶ ಸುಧಾರಣೆಗೆ ಕಾರಣಕರ್ತರು. ಮುಂದಿನ ಸಾಧನೆಗೆ ಸಿದ್ಧರಾಗಿ, ನಿರಂತರ ಶ್ರಮ ಇರಲಿ ಎಂದು ಸಲಹೆ ನೀಡಿದರು.

ಪ್ರಸ್ತುತ ಶೈಕ್ಷಣಿಕ ಹಾದಿ ಅಂಕಗಳಿಗೆ ಮಾತ್ರ ಸೀಮಿತವಾಗಿದೆ. ಅಂಕಗಳ ಜತೆ ಮಾನವೀಯ ಮೌಲ್ಯ, ಕೌಶಲಾಭಿವೃದ್ಧಿ, ಶಿಸ್ತು ಹಾಗೂ ಕಠಿಣ ಶ್ರಮವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಕ್ಯಾನ್ಸರ್ ವೈದ್ಯ ಡಾ. ರಮೇಶ ಸಾಗರ್ ಮಾತನಾಡಿ, ‘ಎಸ್ಎಸ್ಎಲ್ಸಿ ನಂತರ ಕೋರ್ಸ್ ಆಯ್ಕೆ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುತ್ತದೆ. ಪ್ರತಿಯೊಬ್ಬರಿಗೂ ಡಿಸಿ, ಐಪಿಎಸ್ ಆಗುವ ಅವಕಾಶ ಇದೆ. ವಿಜ್ಞಾನ, ವಾಣಿಜ್ಯ, ಕಲಾ ಯಾವುದೇ ವಿಭಾಗ ಆಯ್ಕೆ ಮಾಡಿಕೊಂಡರೂ ಗುರಿ ಇಟ್ಟುಕೊಂಡು ಓದಿ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ತಯಾರಿ ನಡೆಸಬೇಕು’ ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಪವಾರ್, ಪ್ರಮುಖರಾದ ಪ್ರಶಾಂತ, ಅಮರೇಗೌಡ, ಯೂನೀಸ್ ಬಾಬು, ಭಾರತ ಜ್ಞಾನ ವಿಜ್ಞಾನ ಸಮಿತಿ ಸಂಚಾಲಕ ಸೈಯದ್ ಹಫೀಜುಲ್ಲಾ, ರಾಕೇಶ ರಾಜಲಬಂಡಿ, ಮಹ್ಮದ್ ಯೂನೂಸ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-32-1358612354

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.