ರಾಮದುರ್ಗ: ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕವು ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜೂನ್ 12 ರಂದು ಬಸವಶ್ರೀ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ಆಯೋಜಿಸಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಶಶಿಧರ ಮಾಳವಾಡ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2026ರಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಅಧಿಕ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ತಾಲ್ಲೂಕಿನ ಸಮಾಜದ ಪ್ರತಿಭಾನ್ವಿತ ಮಕ್ಕಳನ್ನು ಎಂಬಿಬಿಎಸ್ ಹಾಗೂ ಪಿಎಚ್ಡಿ ಪಾಸಾಗಿರುವ ಪ್ರತಿಭಾವಂತರಿಗೆ ಸಹ ಬಸವಶ್ರೀ ಪುರಸ್ಕಾರವನ್ನು ಪಟ್ಟಣದ ಬಸವ ಗಾರ್ಡನ್ (ಆರಿಬೆಂಚಿ ಕಲ್ಯಾಣ ಮಂಟಪ)ದಲ್ಲಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಶಾಸಕ ಅಶೋಕ ಪಟ್ಟಣ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ರೂಢಗಿ ಆಗಮಿಸುವರು. ಅತಿಥಿ ಉಪನ್ಯಾಸಕರಾಗಿ ಅಂತರರಾಷ್ಟ್ರೀಯ ಖ್ಯಾತಿಯ ಹಿಂದೂಸ್ತಾನಿ ಗಾಯಕ ಮೃತ್ಯುಂಜಯ ಶೆಟ್ಟರ ಆಗಮಿಸುವರು ಎಂದರು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಈರಣ್ಣಾ ಬುಡ್ಡಾಗೋಳ (ಮೊ. 9481004733), ಯುವ ಘಟಕದ ಪ್ರಧಾನ ಕಾರ್ಯದರ್ಶಿ ಈರಣ್ಣ ಕಲ್ಯಾಣಿ (9108603110), ಪ್ರಭು ನಡಮನಿ (9008761668), ಸುರೇಶ ಆಲಗುಂಡಿ (9449464910) ಅವರನ್ನು ಜೂನ್ 10ರ ಒಳಗಾಗಿ ಸಂಪರ್ಕಿಸಿ ಹೆಸರು ನೋಂದಾಯಿಸಲು ತಿಳಿಸಿದರು. ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಪ್ರಭಾ ಪುಠಾಣಿ, ತಾಲ್ಲೂಕು ಘಟಕದ ಹಿರಿಯ ಉಪಾಧ್ಯಕ್ಷ ಪ್ರೊ. ಎಸ್.ಎಂ. ಸಕ್ರಿ, ಪ್ರಧಾನ ಕಾರ್ಯದರ್ಶಿ ಈರಣ್ಣ ಬುಡ್ಡಾಗೋಳ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಈರಣ್ಣ ಕಲ್ಯಾಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-21-1349754587

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.