ರಾಮದುರ್ಗ: ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲ್ಲೂಕು ಘಟಕ ಮತ್ತು ಕನಕ ನೌಕರರ ಸಂಘದ ಆಶ್ರಯದಲ್ಲಿ 24ರಂದು ಪ್ರತಿಭಾ ಪುರಸ್ಕಾರ ಸಮಾರಂಭ ಪ್ರಗತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಪಡಿಯಪ್ಪ ಕ್ವಾರಿ ಹೇಳಿದರು.

ಶುಕ್ರವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಎಸ್ಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ ಶೇ 85ರಷ್ಟು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸತ್ಕರಿಸಲಾಗುವುದು. ಧಾರವಾಡದ ಜಿನಿಯಸ್ ಕೋಚಿಂಗ್ ಅಕಾಡೆಮಿಯ ಸಿದ್ಧಾರ್ಥ ದಳವಾಯಿ ಅವರಿಂದ ಮಕ್ಕಳಿಗೆ ಐಎಎಸ್ ಮತ್ತು ಐಪಿಎಸ್ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಕುರುಬ ಸಮಾಜದ ಮಕ್ಕಳು ಪರೀಕ್ಷೆಗಳಲ್ಲಿ ಪ್ರತಿಶತ 85 ರಷ್ಟು ಅಂಕ ಗಳಿಸಿದವರು ತಮ್ಮ ಅಂಕ ಪಟ್ಟಿ, ಆಧಾರ ಕಾರ್ಡ್ ಸಮೇತ ಸಮಾಜದ ಮುಖಂಡರಾದ ಪಡಿಯಪ್ಪ ಕ್ವಾರಿ (9740472786), ಸಿದ್ದಪ್ಪ ಮಕ್ಕಣ್ಣವರ (9741953084), ಕೆ.ಎನ್. ಯಡ್ರಾವಿ (9663174016), ಎಂ.ಎನ್. ಗವನ್ನವರ (9481559878), ಕರಿಯಪ್ಪ ಕ್ವಾರಿ (8722283667) ಅವರನ್ನು ಮೇ ತಿಂಗಳ 22ರ ಒಳಗಾಗಿ ಸಂಪರ್ಕಿಸಿ ಹೆಸರು ನೋಂದಾಯಿಸಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಮಲ್ಲಪ್ಪ ಸೋಮಗೊಂಡ, ಈರಣ್ಣ ಕಾಮನ್ನವರ, ಅಶೋಕ ಮೆಟಗುಡ್ಡ, ಸೋಮಶೇಖರ ಸಿದ್ಲಿಂಗಪ್ಪನವರ ಸೇರಿದಂತೆ ಅನೇಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-21-1465938365

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.