ರಾಮದುರ್ಗ: ತಾಲ್ಲೂಕಿನ ಚಂದರಗಿಯ ಎಸ್.ಎಂ. ಕಲೂತಿ ಸಂಯುಕ್ತ ಕ್ರೀಡಾ ವಸತಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶವು ಶೇ 100ರಷ್ಟಾಗಿದೆ. 64 ವಿದ್ಯಾರ್ಥಿಗಳಲ್ಲಿ 17 ಡಿಸ್ಟಿಂಕ್ಷನ್, 39 ವಿದ್ಯಾರ್ಥಿಗಳು ಪ್ರಥಮ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಂಕರ ಗಿಡ್ಡಾಳಿ ಶೇ 96, ಶರತ್ ಬನ್ನೂರ ಶೇ 95.68, ಶ್ರವಣ ಐನಾಪುರ ಶೇ 95.36 ಅಂಕ ಗಳಿಸಿ ಮೊದಲ ಮೂರು ಸ್ಥಾನ ಪಡೆದಿದ್ದಾರೆ, ಹಿಂದಿ ವಿಷಯದಲ್ಲಿ 13, ಸಮಾಜ ವಿಜ್ಞಾನ ವಿಷಯದಲ್ಲಿ ಇಬ್ಬರು ನೂರು ಅಂಕ ಗಳಿಸಿದ್ದಾರೆ. ಸಂಸ್ಥೆಯ ಸಂಸ್ಥಾಪಕ ಎಸ್.ಎಂ. ಕಲೂತಿ, ಅಧ್ಯಕ್ಷೆ ಮೃಣಾಲಿಣಿ ಪಟ್ಟಣ, ಉಪಾಧ್ಯಕ್ಷ ಮಹೇಶ ಭಾತೆ, ಪ್ರಾಚಾರ್ಯ ಐ.ಎಸ್. ಸೂಳಿಭಾವಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-21-1336080996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.