ರಾಮನಗರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಮೊದಲ ಮೂರು ಸ್ಥಾನಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಮ್ಮ ಕಚೇರಿಯಲ್ಲಿ ಸೋಮವಾರ ಸನ್ಮಾನಿಸಿದರು.

ಪ್ರಥಮ ಸ್ಥಾನ ಗಳಿಸಿದ ಮಾಗಡಿಯ ವಾಸವಿ ವಿದ್ಯಾನಿಕೇತನ ಪ್ರೌಢಶಾಲೆಯ ಸೃಷ್ಟಿ ಎಂ.ಎಸ್. (ಶೇ 99.52), ದ್ವಿತೀಯ ಸ್ಥಾನ ಪಡೆದ ಸ್ಪೆಕ್ಟ್ರಾ ಇಂಟರ್ನ್ಯಾಷನಲ್ ಸ್ಕೂಲ್ನ ದೀಕ್ಷಿತ್ ವೈ.ಕೆ (ಶೇ 99.2) ಹಾಗೂ ತೃತೀಯ ಸ್ಥಾನ ಪಡೆದ ಕುದೂರಿನ ಗುರುಕುಲ ವಿದ್ಯಾಮಂದಿರದ ಅಮೃತ್ ಗೌಡ (ಶೇ 99.04) ಮತ್ತು ರಾಮನಗರ ತಾಲ್ಲೂಕಿನ ಆನುಮಾನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿಶ್ವಾಸ್ ಗೌಡ ವಿ. (ಶೇ 99.04) ಅವರಿಗೆ ಮೈಸೂರು ಪೇಟ ತೊಡಿಸಿ ಮಾಲೆ ಹಾಕಿ ಪ್ರಶಂಸೆ ಪತ್ರಗಳನ್ನು ನೀಡಲಾಯಿತು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ‘ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ಬಾರಿ ಜಿಲ್ಲೆಯಲ್ಲಿ ಫಲಿತಾಂಶವು 90ರ ಗಡಿಯನ್ನು ದಾಟಿರುವುದು ಖುಷಿ ತಂದಿದೆ. ಮೊದಲ ಮೂರು ಸ್ಥಾನ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳು ಸಾಧನೆ ಅಮೋಘವಾದುದು. ವಿದ್ಯಾರ್ಥಿಗಳು ತಮ್ಮಿಷ್ಟದ ವಿಷಯದಲ್ಲಿ ವಿಷಯದಲ್ಲಿ ಚನ್ನಾಗಿ ಓದು ಉತ್ತಮ ಸಾಧನೆ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ಇದೇ ವೇಳೆ ಜಿಲ್ಲಾಧಿಕಾರಿ ಮಕ್ಕಳಿಗೆ ಸಿಹಿ ವಿತರಿಸಿದರು. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್. ಸ್ವಾಮಿ, ರಾಮನಗರ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸೋಮಲಿಂಗಯ್ಯ, ಸಿಆರ್ಪಿ ರಾಜಶೇಖರ ಪಾಟೀಲ ಹಾಗೂ ವಿದ್ಯಾರ್ಥಿಗಳ ಪೋಷಕರು ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-14-1448472851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.