ಶಿರಸಿ (ಉತ್ತರ ಕನ್ನಡ ಜಿಲ್ಲೆ): ‘ರಾಜ್ಯ ಶಿಕ್ಷಣ ಇಲಾಖೆಯು ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ತಂದಿರುವ ಬದಲಾವಣೆಗಳು ದುರದೃಷ್ಟಕರ ಮತ್ತು ವಿದ್ಯಾರ್ಥಿ ವಿರೋಧಿಯಾಗಿವೆ‘ ಎಂದು ಸಂಸದ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದಶಕಗಳಿಂದ ಯಶಸ್ವಿಯಾಗಿ ಜಾರಿಯಲ್ಲಿದ್ದ ತ್ರಿಭಾಷಾ ಸೂತ್ರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಕೊಡಲಿ ಪೆಟ್ಟು ನೀಡುತ್ತಿದ್ದಾರೆ. ತೃತೀಯ ಭಾಷೆಯ ಅಂಕಗಳನ್ನು ಕೈಬಿಟ್ಟು ಕೇವಲ ಗ್ರೇಡ್ ಪದ್ಧತಿಗೆ ಸೀಮಿತಗೊಳಿಸಿರುವುದು ಶಿಕ್ಷಣ ಕ್ಷೇತ್ರದಲ್ಲಿ ಅರಾಜಕತೆ ಸೃಷ್ಟಿಸಲಿದೆ. ಸಚಿವರ ಈ ಅಪ್ರಬುದ್ಧ ನಿರ್ಧಾರವು ರಾಜ್ಯದ ಶೈಕ್ಷಣಿಕ ಘನತೆಗೆ ಧಕ್ಕೆ ತಂದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ವಿದ್ಯಾರ್ಥಿ ಗಳು ಕನ್ನಡವನ್ನು ಅಸ್ಮಿತೆಯಾಗಿ, ಇಂಗ್ಲಿಷ್ ಅನ್ನು ಸಂವಹನಕ್ಕಾಗಿ ಹಾಗೂ ಹಿಂದಿ ಅಥವಾ ಸಂಸ್ಕೃತವನ್ನು ರಾಷ್ಟ್ರೀಯ ಮತ್ತು ಸಾಂಸ್ಕೃತಿಕ ದೃಷ್ಟಿಕೋನದಿಂದ ಕಲಿಯುತ್ತಿದ್ದರು. ಆದರೆ ಈಗ ತೃತೀಯ ಭಾಷೆಯು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಇದರಿಂದ ಮಕ್ಕಳ ಭಾಷಾ ಸಾಮರ್ಥ್ಯ ಕುಂಠಿತಗೊಳ್ಳಲಿದೆ. ಶಿಕ್ಷಣ ತಜ್ಞರ ಜತೆ ಯಾವುದೇ ಪೂರ್ವಭಾವಿ ಚರ್ಚೆ ನಡೆಸದೆ ಏಕಾಏಕಿ ಇಂತಹ ಬದಲಾವಣೆ ಜಾರಿಗೊಳಿಸಿರುವುದು ಸಚಿವರ ಸರ್ವಾಧಿಕಾರಿ ಧೋರಣೆಯನ್ನು ಎತ್ತಿ ತೋರಿಸುತ್ತದೆ’ ಎಂದು ಟೀಕಿಸಿದ್ದಾರೆ.

‘ಶಿಕ್ಷಣ ಕ್ಷೇತ್ರವು ರಾಜಕೀಯ ಪ್ರಯೋಗಶಾಲೆಯಲ್ಲ. ಈ ನಿರ್ಧಾರದಿಂದ ನಮ್ಮ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಹಿನ್ನೆಡೆ ಅನುಭವಿಸುವಂತಾಗುತ್ತದೆ. ಸರ್ಕಾರ ಈ ಆದೇಶವನ್ನು ರದ್ದುಗೊಳಿಸಿ, ಭಾಷಾ ತಜ್ಞರು ಹಾಗೂ ಸಾಹಿತಿಗಳ ಸಮ್ಮುಖದಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಬೇಕು’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-51-195616534

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.