ಶಿರಸಿ: ತಾಲ್ಲೂಕಿನ ಗೋಳಿಯ ಸಿದ್ಧಿವಿನಾಯಕ ಪ್ರೌಢಶಾಲೆಯು 2026ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಯು ಸತತ ಸಾಧನೆಯ ಹಾದಿಯಲ್ಲಿ ಮುನ್ನಡೆದಿದೆ. ಶಾಲೆಯು ಒಟ್ಟಾರೆಯಾಗಿ ಶೇ 84.10 ಅಂಕಗಳನ್ನು ಗಳಿಸಿದ್ದು, ಎ ಗ್ರೇಡ್ ಪಡೆಯುವ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಸಾಬೀತುಪಡಿಸಿದೆ. ವೈಯಕ್ತಿಕ ಸಾಧನೆಯಲ್ಲಿ ಕ್ಷಮಾ ಚಿದಾನಂದ ಹೆಗಡೆ ಭರತೋಟ ಶೇ.95.36 ಫಲಿತಾಂಶದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಚಿನ್ಮಯಿ ನಾಗರಾಜ ಗೌಡ ನಾಡಗುಳಿ ಶೇ.94.40 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದರೆ, ಭರತ ಚಂದ್ರಶೇಖರ ಮಡಿವಾಳ ಕೊಂಬೇಸರ ಶೇ.92 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾನೆ.

ಸಂಗೀತಾ ದೇವೇಂದ್ರ ಗೌಡ ಹಲಸಿನಳ್ಳಿ ಶೇ.90.24 ಅಂಕಗಳೊಂದಿಗೆ ಶಾಲೆಗೆ ಚತುರ್ಥ ಸ್ಥಾನ ಪಡೆದಿದ್ದಾಳೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-20-1086562285

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.