ಸಿರುಗುಪ್ಪ: ‘2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ತಾಲ್ಲೂಕು ಉತ್ತಮ ಸಾಧನೆ ಮಾಡಿದೆ. ಅಲ್ಲದೇ 15 ಶಾಲೆಗಳು ಶೇ100 ಫಲಿತಾಂಶ ಪಡೆದಿದ್ದು, ಒಟ್ಟಾರೆ ತಾಲ್ಲೂಕು ಶೇ 93.52 ಫಲಿತಾಂಶ ಪಡೆಯುವ ಮೂಲಕ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಗುರಪ್ಪ ತಿಳಿಸಿದರು.

ಒಟ್ಟು 61 ಪ್ರೌಢಶಾಲೆಗಳಿವೆ. 3,613 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 3,379 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

‘ಗ್ರಾಮೀಣ ಪ್ರದೇಶದ ಸರ್ಕಾರಿ ಪ್ರೌಢಶಾಲೆಗಳು, ಕರೂರಿನ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ನಡವಿ ಕಿತ್ತೂರುರಾಣಿ ಚನ್ನಮ್ಮ ಹಾಗೂ ಮೊರಾರ್ಜಿ ದೇಸಾಯಿ ವಸತಿ, ಕೆಂಚನಗುಡ್ಡ ಹಾಗೂ ಬಗ್ಗೂರು ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಖಾಸಗಿ ಅನುದಾನ ರಹಿತ 5 ಶಾಲೆಗಳು ಪೂರ್ಣ ಫಲಿತಾಂಶ ಸಾಧಿಸಿವೆ’ ಎಂದರು.

ನಡವಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ನಯನಶ್ರೀ ಶೇ 98.24, ಉಪ್ಪಾರ ಮಹಾಲಕ್ಷ್ಮಿ ಶೇ 98.08, ಮಾಟಸೂಗೂರು ಸರ್ಕಾರಿ ಪ್ರೌಢಶಾಲೆಯ ಭುವನೇಶ್ವರಿ ಶೇ 97.76 ಹಾಗೂ ಕರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪಿ.ರವಿಕುಮಾರ ಶೇ 97.76 ಅಂಕ ಪಡೆದು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-25-1259040103

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.