ಬೆಂಗಳೂರು: ಹಿಂದಿ ಸೇರಿದಂತೆ ಎಸ್ಎಸ್ಎಲ್ಸಿ ತೃತೀಯ ಭಾಷೆಗೆ ಅಂಕ ಅಥವಾ ಗ್ರೇಡ್ ನೀಡುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಂಗಳವಾರ (ಏ.21) ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದು, ಫಲಿತಾಂಶದ ದಿನಾಂಕವನ್ನೂ ಪ್ರಕಟಿಸುವ ಸಾಧ್ಯತೆ ಇದೆ.

ಉತ್ತರ ಪತ್ರಿಕೆಗಳನ್ನು ಹಿಂದಿನ ವರ್ಷಗಳಂತೆಯೇ ಮೌಲ್ಯಮಾಪನ ಮಾಡಬೇಕು. ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ನಿರ್ದೇಶನ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ 21ರಂದು ನಡೆಯಲಿದೆ. ಕೋರ್ಟ್ ನಿರ್ದೇಶನ ಪರಿಗಣಿಸಿ, ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಮೂಲಗಳು ಹೇಳಿವೆ.

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 2026ರ ಪರೀಕ್ಷೆ ಯಿಂದಲೇ ಅನ್ವಯವಾಗುವಂತೆ ಮೂರನೇ ಭಾಷಾ ವಿಷಯ ಗಳಿಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು, ಗ್ರೇಡ್ ನಮೂದಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಹಿಂದಿನ ವರ್ಷಗಳಂತೆ 100 ಅಂಕಗಳಿಗೆ ಪ್ರಶ್ನೆಪತ್ರಿಕೆ ಇದ್ದರೂ ಮೌಲ್ಯ ಮಾಪನದ ನಂತರ ಅಂಕಪಟ್ಟಿಯಲ್ಲಿ ಅಂಕಗಳನ್ನು ನಮೂದಿಸದೆ ಗ್ರೇಡ್ ಎ, ಬಿ, ಸಿ ಎಂದು ನಮೂದಿಸಲಾಗುತ್ತದೆ. ಇದು ವರೆಗೂ ಮಕ್ಕಳು 625 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದರು. ಈಗಲೂ ಅಷ್ಟೇ ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಆದರೆ, ತೃತೀಯ ಭಾಷೆ ಹೊರತುಪಡಿಸಿ ಉಳಿದ ವಿಷಯಗಳ ಗರಿಷ್ಠ 525 ಅಂಕಗಳನ್ನಷ್ಟೇ ಪರಿಗಣಿಸಿ, ಪ್ರತಿ ವಿದ್ಯಾರ್ಥಿಯ ಶೇಕಡವಾರು ಅಂಕಗಳನ್ನು ಲೆಕ್ಕ ಹಾಕಲಾಗುತ್ತದೆ ಎಂದು ಕರಡು ಅಧಿಸೂಚನೆಯಲ್ಲಿ ವಿವರಿಸಲಾಗಿತ್ತು.

ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೆಲವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 2025ರ ಪರೀಕ್ಷೆ ವೇಳೆ ಜಾರಿಯಲ್ಲಿದ್ದ ನಿಯಮವನ್ನು ಅನುಸರಿಸಲು ಕೋರ್ಟ್ ಸೂಚಿಸಿದೆ. ಅಷ್ಟು ಹೊತ್ತಿಗೆ ಇಲಾಖೆಯು ಗ್ರೇಡ್ ನೀಡುವ ಕುರಿತು ಅಧಿಸೂಚನೆ ಹೊರಡಿಸಿದೆ.

2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 18 ಏ.1ರವರೆಗೆ ನಡೆದಿತ್ತು. ಏ.24ರಂದು ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಘೋಷಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-649721776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.