ಸುರಪುರ: ‘ವಿದ್ಯಾರ್ಥಿ ಜೀವನವು ಬದುಕಿನ ಬುನಾದಿಯಿದ್ದಂತೆ. ನೀವು ಗಳಿಸಿರುವ ಅಂಕಗಳು ನಿಮ್ಮ ಕಠಿಣ ಪರಿಶ್ರಮಕ್ಕೆ ಸಂದ ಜಯ. ಇದೇ ಉತ್ಸಾಹವನ್ನು ನೀವು ಮುಂದಿನ ಉನ್ನತ ಶಿಕ್ಷಣದಲ್ಲೂ ಮುಂದುವರಿಸಬೇಕು’ ಎಂದು ರುಕ್ಮಾಪುರ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಶಾಂತಮೂರ್ತಿ ಶಿವಾಚಾರ್ಯರು ಹೇಳಿದರು.

ತಾಲ್ಲೂಕಿನ ರುಕ್ಮಾಪುರ ಗ್ರಾಮದ ಬನಶಂಕರಿದೇವಿ ದೇವಸ್ಥಾನದ ಆವರಣದಲ್ಲಿ ಬನಶಂಕರಿ ದೇವಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ಮತ್ತು ಗುರು-ಹಿರಿಯರಲ್ಲಿ ಗೌರವ ಭಾವನೆ ಇಟ್ಟುಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಸ್ಪಷ್ಟವಾದ ಗುರಿ ಮತ್ತು ಅದನ್ನು ತಲುಪುವ ಛಲ ಇರಬೇಕು. ಸಮಾಜಕ್ಕೆ ಉಪಯುಕ್ತವಾಗುವಂತಹ ಮೌಲ್ಯಗಳನ್ನು ಶಿಕ್ಷಣದೊಂದಿಗೆ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಅಕ್ಕಲಕೋಟೆಯ ಈಶ್ವರಾನಂದ ಸ್ವಾಮೀಜಿ ಮಾತನಾಡಿ, ‘ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸವೇ ಯಶಸ್ಸಿನ ಗುಟ್ಟು. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಉತ್ಸಾಹ ತುಂಬಿ, ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಪ್ರೇರಣೆಯಾಗುತ್ತವೆ’ ಎಂದರು.

ನಿವೃತ್ತ ಪ್ರಾಚಾರ್ಯ ಬಸವರಾಜ ಬಡಗಾ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಶಿಕ್ಷಕ ಮಹೇಶ ಕುಂಟೋಜಿ, ಉಪನ್ಯಾಸಕ ರಜಾಕ್ ಬಾಗವಾನ್ ಮಾತನಾಡಿದರು. ಅರ್ಚಕ ಈರಣ್ಣ ಪೂಜಾರಿ ನೇತೃತ್ವ ವಹಿಸಿದ್ದರು. ಮಹಾಂತೇಶ ಕಲ್ಲೂರು ಅಧ್ಯಕ್ಷತೆ ವಹಿಸಿದ್ದರು.

ಸುರೇಶ ಚಟ್ಟಿ, ಹಣಮೇಶಗೌಡ ಪೊಲೀಸ್ ಪಾಟೀಲ, ಮಲ್ಲಕಾರ್ಜುನ ಚಟ್ಟಿ ವೇದಿಕೆಯಲ್ಲಿದ್ದರು. ಸನ್ಮಾನಿತ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಗಣ್ಯರು ಇದ್ದರು. ಅಂಬರೀಶ ಚಿಲ್ಲಾಳ ಸ್ವಾಗತಿಸಿದರು. ಬಸವರಾಜ ಯಾಳಗಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-30-1545905056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.