ಉಳ್ಳಾಲ: ಸೋಷಿಯಲ್ ಟೀಮ್ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ತಲಪಾಡಿಯಲ್ಲಿ ನಡೆಯಿತು.

ಡಾ.ಅಬ್ದುಲ್ ರಶೀದ್ ಝೈನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ಇಬ್ರಾಹೀಮ್ ಪೂಮಣ್ಣು ಮಾತನಾಡಿ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿರುವುದು ಶ್ಲಾಘನೀಯ ಎಂದರು.

ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಡ ಕುಟುಂಬದ ವ್ಯಕ್ತಿಯ ಚಿಕಿತ್ಸೆಗೆ, ಐದು ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಪಾವತಿಸಲು ಸಹಾಯ ಧನದ ಚೆಕ್ ವಿತರಿಸಲಾಯಿತು.

ಸಮಾಜ ಸೇವಕರಾದ ಸೋಷಿಯಲ್ ಫಾರೂಕ್, ಇಬ್ರಾಹಿಂ ಹುಸೈನ್, ಅಶ್ಪಾಕ್ ಮರವೂರ್, ವಾಣಿ ತಲಪಾಡಿ, ನಝಿಮಾ ಅವರನ್ನು ಸನ್ಮಾನಿಸಲಾಯಿತು.

ಅನಿವಾಸಿ ಭಾರತೀಯ ಅಶ್ಪಾಕ್ ಮರವೂರು, ತಲಪಾಡಿ ಪಿಡಿಒ ಸಂಧ್ಯಾ, ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ, ಸಲಾಮ್ ಕೆ.ಸಿ. ರೋಡ್, ಅಬ್ಬಾಸ್ ಉಚ್ಚಿಲ, ಸಂಶುದ್ದೀನ್ ಉಚ್ಚಿಲ, ಜಯಪ್ರಕಾಶ್ ಎಂ.ಆರ್., ಬಿ.ಎಸ್. ಇಸ್ಮಾಯಿಲ್, ವೈಭವ ಶೆಟ್ಟಿ, ಇಬ್ರಾಹಿಂ, ಮಕ್ಯಾರ್ ಅಬ್ದುಲ್ ಖಾದರ್ ಭಾಗವಹಿಸಿದ್ದರು.

ಫಾರೂಕ್ ಸ್ವಾಗತಿಸಿದರು. ಇಸ್ಮಾಯಿಲ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-137396004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.