ತಿಪಟೂರು: ತಾಲ್ಲೂಕು ಒಕ್ಕಲಿಗರ ಸಂಘದಿಂದ 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯೊಂದಿಗೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಎನ್. ಚಿದಾನಂದ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಒಕ್ಕಲಿಗ ಸಮುದಾಯದ ಗ್ರಾಮಾಂತರ ವಿದ್ಯಾರ್ಥಿಗಳಿಗೆ ಶೇಕಡಾ 75 ಮತ್ತು ನಗರ ವಿದ್ಯಾರ್ಥಿಗಳಿಗೆ ಶೇ 85, ತಿಪಟೂರೇತರ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶೇಕಡ 85 ಹಾಗೂ ಎಲ್ಲಾ ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು ಜೂನ್ 15ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದರು.

ಪ್ರತಿಭಾ ಪುರಸ್ಕಾರ ಸಮಿತಿ ಅಧ್ಯಕ್ಷ ದೇವಾನಂದ್ ಮಾತನಾಡಿ, ಹೆಚ್ಚು ಅಂಕ ಗಳಿಸಿದ ಇತರೆ ಸಮುದಾಯಗಳ ವಿದ್ಯಾರ್ಥಿಗಳನ್ನು ಸತ್ಕರಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜು, ಖಜಾಂಚಿ ಡಿ.ಬಿ.ಲಕ್ಷ್ಮಣಗೌಡ, ಪ್ರತಿಭಾ ಪುರಸ್ಕಾರ ಸಮಿತಿ ಕಾರ್ಯದರ್ಶಿ ದೇವರಾಜು, ಖಜಾಂಚಿ ಚಂದ್ರಶೇಖರ್, ನಿರ್ದೇಶಕರಾದ ಮಂಜುನಾಥ್, ಸ್ವಾಮಿ, ರವಿಕುಮಾರ್ ಮತ್ತು ಕುಮಾರ್, ಸಮಿತಿಯ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸದಸ್ಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-457258493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.