ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ಈ ಬಾರಿಯೂ ದ್ವಿತೀಯ ಸ್ಥಾನವನ್ನು ಕಾಯ್ದುಕೊಂಡಿದೆ.

ಜಿಲ್ಲೆಯಲ್ಲಿ ಈ ಬಾರಿ 13,373 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 13,129 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 98.18ರಷ್ಟು ಫಲಿತಾಂಶ ದಾಖಲಾಗಿದೆ.

ಜಿಲ್ಲೆಯ ಒಟ್ಟು 179 ಶಾಲೆಗಳು ಶೇ 100ರಷ್ಟು ಫಲಿತಾಂಶ ಪಡೆದುಕೊಂಡಿವೆ. ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ಶೇ 97.6ರಷ್ಟು, ಅನುದಾನಿತ ಶಾಲೆಗಳಲ್ಲಿ ಶೇ 97. 24ರಷ್ಟು ಹಾಗೂ ಅನುದಾನರಹಿತ ಶಾಲೆಗಳಲ್ಲಿ ಶೇ 99.39ರಷ್ಟು ಫಲಿತಾಂಶ ಬಂದಿದೆ.

ಕಾರ್ಕಳ ತಾಲ್ಲೂಕಿನಲ್ಲಿ ಶೇ 99.02ರಷ್ಟು, ಕುಂದಾಪುರದಲ್ಲಿ ಶೇ 98.59ರಷ್ಟು, ಬ್ರಹ್ಮಾವರದಲ್ಲಿ ಶೇ 98.26ರಷ್ಟು, ಬೈಂದೂರು ಶೇ 97.91ರಷ್ಟು ಹಾಗೂ ಉಡುಪಿಯಲ್ಲಿ ಶೇ 97.21ರಷ್ಟು ಫಲಿತಾಂಶ ದಾಖಲಾಗಿದೆ.

ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಶೇ 99.22ರಷ್ಟು ಹಾಗೂ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶೇ 96.66ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶೇ 98.16ರಷ್ಟು ಹಾಗೂ ನಗರ ಪ್ರದೇಶದ ಶಾಲೆಗಳಲ್ಲಿ ಶೇ 98.22ರಷ್ಟು ಫಲಿತಾಂಶ ದಾಖಲಾಗಿದೆ.

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗಿತ್ತು. ಡಿಸೆಂಬರ್ ವೇಳೆಗಾಗಲೇ ಪಠ್ಯಕ್ರಮಗಳನ್ನು ಮುಗಿಸಿ, ಬಳಿಕ ಹೆಚ್ಚುವರಿ ತರಗತಿಗಳನ್ನು ಕೂಡ ನಡೆಸಲಾಗಿತ್ತು ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

‘2024-25ನೇ ಸಾಲಿನಲ್ಲಿ ಶೇ 89.96ರಷ್ಟು ಫಲಿತಾಂಶ ದಾಖಲಾಗಿತ್ತು. ಈ ವರ್ಷ ಹಿಂದಿನ ವರ್ಷದ ಫಲಿತಾಂಶಕ್ಕಿಂತ ಶೇ 8.22ರಷ್ಟು ಹೆಚ್ಚು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲದ ಸಮನ್ವಯದ ಫಲದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ’ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲೋಕೇಶ್ ಸಿ. ತಿಳಿಸಿದ್ದಾರೆ.

‘ಫಲಿತಾಂಶ ಸುಧಾರಣೆಗಾಗಿ ಬೋಧನೆ ವಿಧಾನದಲ್ಲಿ ಹೊಸತನ ಅಳವಡಿಸಿಕೊಂಡಿದ್ದೇವೆ. ವೈಯಕ್ತಿಕ ಮಾರ್ಗದರ್ಶನದ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೆ ಸಮಾನ ಅಂಶಗಳನ್ನು ಒದಗಿಸಲಾಗಿದೆ. ಜಿಲ್ಲೆಯಲ್ಲಿ ಐದು ವಿಷಯ ಪರಿವೀಕ್ಷಕರ ಹುದ್ದೆ ಖಾಲಿ ಇದ್ದರೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಿಂದ ಉತ್ತಮ ಫಲಿತಾಂಶ ಬಂದಿದೆ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-28-1236466444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.