ಶಿರಸಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇಲ್ಲಿನ ಇಸಳೂರಿನ ಸರ್ಕಾರಿ ಪ್ರೌಢಶಾಲೆಯು ಶೇ.100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ.

ಗ್ರಾಮೀಣ ಭಾಗದ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಈ ಶಾಲೆಯಿಂದ ಪ್ರಸಕ್ತ ಸಾಲಿನಲ್ಲಿ ಒಟ್ಟು 103 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ವಿಶೇಷವೆಂದರೆ, ಶಾಲೆಯ ಆಂಗ್ಲ ಮಾಧ್ಯಮ ವಿಭಾಗವು ಸತತ ಏಳನೇ ವರ್ಷವೂ ಶೇ.100ರಷ್ಟು ಫಲಿತಾಂಶ ಕಾಯ್ದುಕೊಂಡಿದೆ. ಪರೀಕ್ಷೆಗೆ ಹಾಜರಾದವರಲ್ಲಿ 15 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 70 ವಿದ್ಯಾರ್ಥಿಗಳು ಪ್ರಥಮ ದರ್ಜೆ, 11 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ 8 ವಿದ್ಯಾರ್ಥಿಗಳು ಸಾಧಾರಣ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವೈಯಕ್ತಿಕ ಸಾಧನೆಯಲ್ಲಿ ಕೀರ್ತಿ ನಿತ್ಯಾನಂದ ಗೌಡ ಶೇ. 96.96 ಫಲಿತಾಂಶದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಎಸ್.ಎ. ಶ್ರಾವಣಿ ಶೇ. 95.52 ಅಂಕಗಳೊಂದಿಗೆ ದ್ವಿತೀಯ ಹಾಗೂ ಸಂಜಯ ಜಗದೀಶ ನಾಯ್ಕ ಶೇ. 94.72 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-20-1766430837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.