ತಾಳಿಕೋಟೆ: ‘ಸಣ್ಣ ಗ್ರಾಮ ಮೈಲೇಶ್ವರದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿ ಗ್ರಾಮೀಣ ಪ್ರತಿಭೆಗಳನ್ನು ರಾಜ್ಯಮಟ್ಟಕ್ಕೆ ಪರಿಚಯಿಸುವ ಕಾರ್ಯ ಮಾಡುತ್ತಿರುವುದು ಗ್ರಾಮೀಣ, ಬಡ, ರೈತರ ಮಕ್ಕಳ ಆಶಾಕಿರಣವಾಗಿದೆ’ ಎಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಹೇಳಿದರು.

ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬ್ರಿಲಿಯಂಟ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಗಂಗಾ ಅಶೋಕ ಕೋಳೂರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಶುಕ್ರವಾರ ಸನ್ಮಾನಿಸಿ ಮಾತನಾಡಿದರು.

‘ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ತೋರುತ್ತಿರುವುದು ನನ್ನ ಕ್ಷೇತ್ರದ ಕೀರ್ತಿ ಹೆಚ್ಚಿಸಿದೆ. ಅವಳ ಈ ಸಾಧನೆಗೆ ಹಗಲಿರುಳು ಶ್ರಮಿಸಿದ ಆಡಳಿತ ಮಂಡಳಿ, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿನಿಯ ಪೋಷಕರಿಗೆ ಅಭಿನಂದಿಸುತ್ತೇನೆ’ ಎಂದರು.

ಮುಖಂಡ ಮಡುಸೌಕಾರ ಬಿರಾದಾರ ಮಾತನಾಡಿದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಬಿ. ನಡುವಿನಮನಿ, ಉಪಾಧ್ಯಕ್ಷ ಆರ್.ಬಿ. ನಡುವಿನಮನಿ, ನಿರ್ದೇಶಕರಾದ ಎಸ್.ಎಚ್. ಪಾಟೀಲ, ಲೀಲಾದೇವಿ ಎಂ.ಬಿರಾದಾರ, ನಿರ್ಮಲಾ ಎಸ್.ಗಡಗಿ, ಶಶಿಧರ ಬಿರಾದಾರ, ಕನ್ನಡ ಮಾಧ್ಯಮ ಮುಖ್ಯೋಪಾಧ್ಯಾಯ ವಿನಾಯಕ ಪಟಗಾರ, ಇಂಗ್ಲಿಷ್ ಮಾಧ್ಯಮ ಮುಖ್ಯೋಪಾಧ್ಯಾಯ ಬಿ.ಜಿ. ಕರಕಳ್ಳಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಜುಗೌಡ ಕೋಳೂರ, ವೀರೇಶಗೌಡ ಪಾಟೀಲ, ಉಮೇಶ ಮೈಲೇಶ್ವರ, ಅಪ್ಪು ಕುಳಗೇರಿ, ಪಿಡಿಒ ಪ್ರಭು ಚೆನ್ನೂರ ಇದ್ದರು. ಶಿಕ್ಷಕ ಸಿದ್ದು ಕರಡಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-153231227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.