ತಿಕೋಟಾ: ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯಲ್ಲಿ ‘ಪ್ರಜಾವಾಣಿ’ ಪತ್ರಿಕೆ ಸಹಕಾರಿಯಾಗಿ ತಾಲ್ಲೂಕಿನ ಸಿದ್ದಾಪುರ ಕೆ. ಸರ್ಕಾರಿ ಪ್ರೌಢ ಶಾಲೆಗೆ ಈ ವರ್ಷ ಶೇ 98.27 ಫಲಿತಾಂಶ ಲಭಿಸಿದೆ.

ಈ ಸಾಧನೆಗೆ ಉಚಿತವಾಗಿ ವಿತರಿಸಲಾದ ‘ಪ್ರಜಾವಾಣಿ’ ದಿನಪತ್ರಿಕೆಯ ಪಾತ್ರ ಮಹತ್ವದ್ದಾಗಿದೆ’ ಎಂದು ಶಾಲಾ ಮುಖ್ಯ ಶಿಕ್ಷಕ ಎಸ್.ಎಂ.ಅವಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಶೈಲ ಹಡಪದ, ಅಧ್ಯಕ್ಷ ಮಚ್ಚೇಂದ್ರ ಹೊಸಮನಿ ಇವರ ಆಶಯ ಮತ್ತು ಮಾರ್ಗದರ್ಶನದಂತೆ ಶಾಲೆಯ 58 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಾರ್ಥ ‘ಪ್ರಜಾವಾಣಿ’ ದಿನಪತ್ರಿಕೆಯನ್ನು ಉಚಿತವಾಗಿ ವಿತರಿಸಲಾಗಿತ್ತು.

ಈ ದಿನಪತ್ರಿಕೆಯಲ್ಲಿ ಪ್ರತಿದಿನ ಪ್ರಕಟವಾಗುತ್ತಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದ ಮಾದರಿ ಪ್ರಶ್ನೆ ಪತ್ರಿಕೆಗಳು, ಮುಖ್ಯ ಪ್ರಶ್ನೋತ್ತರಗಳು, ವಿಷಯವಾರು ಸಾರಾಂಶಗಳು, ವಿಜ್ಞಾನ ವಿಷಯದ ಚಿತ್ರಣಗಳು, ಸಮಾಜ ವಿಜ್ಞಾನದ ನಕ್ಷೆಗಳು, ಗಣಿತದ ಲೆಕ್ಕಾಚಾರಗಳು ಹಾಗೂ ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವ್ಯಾಕರಣಾಂಶಗಳನ್ನು ವಿದ್ಯಾರ್ಥಿಗಳು ಕ್ರಮಬದ್ಧವಾಗಿ ಅಧ್ಯಯನ ಮಾಡಿರುವುದರಿಂದ ಫಲಿತಾಂಶದಲ್ಲಿ ಏರಿಕೆ ಕಂಡಿದೆ ಎಂದು ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಗೆ ಹಾಜರಾದ ಒಟ್ಟು 58 ವಿದ್ಯಾರ್ಥಿಗಳಲ್ಲಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶಾಲೆಯು ಶೇ 98.27 ಫಲಿತಾಂಶ ದಾಖಲಿಸಿದೆ. ಫಲಿತಾಂಶ ವಿವರ: ಪ್ರೇಮಾ ಗೊಳಸಂಗಿ ಶೇ 95.04, ಸಾವಿತ್ರಿ ರಾಮೋಜಿ ಶೇ 93.44, ಅನ್ನಪೂರ್ಣ ಪೂಜಾರಿ ಶೇ 92.32, ಅಶ್ವಿನಿ ಮೈಶಾಳ ಶೇ 90.40, ಪ್ರಿಯಾಂಕ ಗೊಳಸಂಗಿ ಶೇ 89.12, ಸಾಕ್ಷಿ ಅತ್ತಿಗೇರಿ ಶೇ 87.04 ಅಂಕ ಪಡೆದಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-26-659805287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.