ಸಿಂಧನೂರು: ತಾಲ್ಲೂಕಿನ ವಿರುಪಾಪುರ ಗ್ರಾಮದ ಪಿಎಂಶ್ರೀ ಸರ್ಕಾರಿ ಪ್ರೌಢಶಾಲೆಯು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 98.21 ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಶಾಲೆಯ ಮುಖ್ಯಶಿಕ್ಷಕಿ ರಮಾದೇವಿ ಶಂಭೋಜಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಪರೀಕ್ಷೆಗೆ ಹಾಜರಾದ 56 ವಿದ್ಯಾರ್ಥಿಗಳಲ್ಲಿ 55 ಮಂದಿ ಉತ್ತೀರ್ಣರಾಗಿದ್ದಾರೆ. 625 ಅಂಕಗಳಿಗೆ ಶೇ 94.88 ಅಂಕಗಳನ್ನು ಪಡೆದ ಸಿದ್ದನಗೌಡ ಶಾಲೆಗೆ ಪ್ರಥಮ ಸ್ಥಾನ, ಶೇ 92.8 ಅಂಕಗಳನ್ನು ಪಡೆದ ಸ್ನೇಹಾ ಎಂ ದ್ವಿತೀಯ ಸ್ಥಾನ, ಶೇ 90.72 ಅಂಕಗಳನ್ನು ಪಡೆದ ಸುಮಯ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಒಟ್ಟು 15 ಅತ್ಯುನ್ನತ ಶ್ರೇಣಿ, 22 ಪ್ರಥಮ ಶ್ರೇಣಿ, 8 ದ್ವಿತೀಯ ಶ್ರೇಣಿ ಹಾಗೂ 10 ಪಾಸ್ ಕ್ಲಾಸ್ನಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಎಸ್ಡಿಎಂಸಿ ಅಧ್ಯಕ್ಷ ನಿಂಗಪ್ಪ ಹಾಗೂ ಸದಸ್ಯರು, ಶಿಕ್ಷಕ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-32-829538588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.