ಸುರಪುರ: ‘ಕನ್ನಡ ಭಾಷೆಯಲ್ಲಿ ಪೂರ್ಣ ಅಂಕಗಳನ್ನು ಪಡೆಯುವುದು ಕೇವಲ ಬುದ್ಧಿವಂತಿಕೆಯಲ್ಲ, ಅದೊಂದು ಕಲೆಯೂ ಹೌದು. ಕನ್ನಡ ಭಾಷೆಗೆ ಇಂದು ಹೆಚ್ಚಿನ ಪ್ರಾಧಾನ್ಯತೆ ನೀಡುವ ಅಗತ್ಯವಿದೆ’ ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ರಾಜಾ ಮುಕುಂದನಾಯಕ ಹೇಳಿದರು.

ಗರುಡಾದ್ರಿ ಕಲಾಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಶತ ಪ್ರತಿಶತ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಭಾನುವಾರ ಹಮ್ಮಿಕೊಂಡಿದ್ದ ‘ಕನ್ನಡ ಭಾಷಾ ಗುಣಾಗ್ರಣಿ’ ಪ್ರಶಸ್ತಿ ಪ್ರದಾನ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕನ್ನಡವನ್ನು ಅಚ್ಚುಕಟ್ಟಾಗಿ ಬರೆದು ಶತ ಪ್ರತಿಶತ ಅಂಕ ಪಡೆಯುವುದು ವಿಶೇಷ ಸಾಧನೆಯಾಗಿದೆ. ಈ ಸಾಧನೆಯ ಹಿಂದೆ ವಿದ್ಯಾರ್ಥಿಗಳ ಶ್ರಮದ ಜೊತೆಗೆ ಪೋಷಕರ ಮತ್ತು ಶಿಕ್ಷಕರ ಪಾತ್ರವೂ ದೊಡ್ಡದಿದೆ’ ಎಂದರು.

ಸಹ ಪ್ರಾಧ್ಯಾಪಕ ವಿದ್ಯಾಸಾಗರ ಹೂಗಾರ ಮಾತನಾಡಿ, ‘ಪಂಪ, ರನ್ನ, ಜನ್ನರಂತಹ ಮಹಾನ್ ಸಾಹಿತಿಗಳು ಕನ್ನಡವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕನ್ನಡ ಬೆಳವಣಿಗೆಯಲ್ಲಿ ಸಾಹಿತಿಗಳ ಜೊತೆಗೆ ಚಿತ್ರರಂಗದ ಕೊಡುಗೆಯೂ ಅಪಾರವಾಗಿದ್ದು, ವಿಶೇಷವಾಗಿ ರಾಜ್ಕುಮಾರ ಅವರ ಕಂಚಿನ ಕಂಠ ಮತ್ತು ನಟನೆಯು ಕನ್ನಡವನ್ನು ವಿಶ್ವವ್ಯಾಪಿ ಜನಪ್ರಿಯಗೊಳಿಸಿದೆ’ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮರಡ್ಡಿ ಮಂಗಿಹಾಳ, ಅಧ್ಯಕ್ಷತೆ ವಹಿಸಿ ಕಸಾಪ ಅಧ್ಯಕ್ಷ ಶರಣಬಸಪ್ಪ ಯಾಳವಾರ ಮಾತನಾಡಿದರು.

ಪ್ರಭುಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇಸಿಒ ಶರಣಬಸವ ಗಚ್ಚಿನಮನಿ, ವಕೀಲ ನಾಗರಡ್ಡಿ ಗೌಡಪ್ಪಗೋಳ ವೇದಿಕೆಯಲ್ಲಿದ್ದರು. 50 ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಗುಣಾಗ್ರಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಚ್.ರಾಠೋಡ ಸ್ವಾಗತಿಸಿದರು. ವೆಂಕಟೇಶ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪದ್ಮಾಕ್ಷಿ ಶಹಾಪುರಕರ್ ನಾಡಗೀತೆ ಹಾಡಿದರು. ದೇವು ಹೆಬ್ಬಾಳ ನಿರೂಪಿಸಿದರು. ಸಾಯಬರೆಡ್ಡಿ ಇಟಗಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-30-1405569122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.