ಗುರುಮಠಕಲ್: ಫ್ರಂಟ್ಲೈನ್ ಶಾಲೆಯ ವಿದ್ಯಾರ್ಥಿ ಪ್ರೇರಣಾ ಶೇ 99.52 ಅಂಕ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ನಮ್ಮ ತಾಲ್ಲೂಕಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಾಲ್ಲೂಕು ನೋಡೆಲ್ ಅಧಿಕಾರಿಯೂ ಆಗಿರುವ ಇಸಿಒ ರವೀಂದ್ರ ಚವಾಣ್ ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಫ್ರಂಟ್ಲೈನ್ ಶಾಲೆಯಲ್ಲಿ ಶುಕ್ರವಾರ ಜರುಗಿದ ಎಸ್ಎಸ್ಎಲ್ಸಿ ಪರೀಕ್ಷೆ-1 ರಲ್ಲಿ ಉತ್ತಮ ಫಲಿತಾಂಶ ಸಾಧಿಸಿದ ಶಾಲೆಯ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿಆರ್ಪಿ ಬಾಲಪ್ಪ ಸಿರಿಗೆಂ ಮಾತನಾಡಿ, ‘ಡಿಡಿಪಿಐ ಹಾಗೂ ಡಯಟ್ ಪ್ರಾಂಶುಪಾಲರ ನಿರಂತರ ಪರಿಶೀಲನೆ ಮತ್ತು ಮಾರ್ಗದರ್ಶನದಿಂದ ನಮ್ಮ ಜಿಲ್ಲೆಯ ಫಲಿತಾಂಶದಲ್ಲಿ ಸುಧಾರಣೆಯಾಗಿದೆ. ಅದರ ಜತೆಗೆ ವಿದ್ಯಾರ್ಥಿಗಳೂ ಯಾವುದೇ ಅಳುಕಿಲ್ಲದೆ ಅಭ್ಯಾಸದಲ್ಲಿ ತೊಡಗಿದರೆ ರಾಜ್ಯಮಟ್ಟದಲ್ಲಿ ಸ್ಥಾನ ಪಡೆಯಲು ಸಾಧ್ಯ ಎನ್ನುವ ಪ್ರೇರಣೆ ಪಡೆಯಿರಿ’ ಎಂದು ಸಲಹೆ ನೀಡಿದರು.

ಶಾಲೆಯ ಆಡಳಿತಾಧಿಕಾರಿ ಅಖಿಲೇಶರೆಡ್ಡಿ ಗವಿನೋಳ ಮಾತನಾಡಿ, ‘ನಮ್ಮ ಶಾಲೆಯ 122 ವಿದ್ಯಾರ್ಥಿಗಳಲ್ಲಿ 121 ಜನ ಉತ್ತೀರ್ಣರಾಗಿದ್ದಾರೆ. ಬಹುತೇಕ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ’ ಎಂದು ಹೇಳಿದರು.

ಸಂಸ್ಥೆಯ ಮಂಜುಳಾ ರೆಡ್ಡಿ, ರವೀಂದ್ರರೆಡ್ಡಿ ಗವಿನೋಳ, ವಿಜಯಾ ಸೇರಿದಂತೆ ಸಿಬ್ಬಂದಿ ಮತ್ತು ಪೋಷಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-30-1015119982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.