ಯಾದಗಿರಿ: 2025–26ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ಜಿಲ್ಲೆಯ ಅಗ್ರ ಸ್ಥಾನ ಪಡೆದ ಟಾಪ್ 10 ವಿದ್ಯಾರ್ಥಿಗಳು, ಶೇ 100ರಷ್ಟು ಫಲಿತಾಂಶ ದಾಖಲಿಸಿದ ಶಾಲೆಗಳ ಮುಖ್ಯಶಿಕ್ಷಕರು ಹಾಗೂ ಆಯ್ದ ಅತಿಥಿ ಶಿಕ್ಷಕರಿಗೆ ಬುಧವಾರ ಸನ್ಮಾನ ಮಾಡಲಾಯಿತು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ವತಿಯಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸನ್ಮಾನಿಸಿದ ಅಧಿಕಾರಿಗಳು, ಪ್ರೋತ್ಸಾಹದ ಮಾತುಗಳನ್ನು ನುಡಿದರು. ಮುಂದಿನ ವರ್ಷ ಇನ್ನಷ್ಟು ಸಾಧನೆಗಳು ಹೊರಹೊಮ್ಮಿ, ಜಿಲ್ಲೆ ರಾಜ್ಯದಲ್ಲಿ ಅಗ್ರ 10ರ ಒಳಗೆ ಸ್ಥಾನ ಪಡೆಯುವಂತೆ ಆಗಲಿ ಎಂದು ಆಶಿಸಿದರು.

ಸಭಾಂಗಣದಲ್ಲಿ ನೆರೆದಿದ್ದ ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು, ಅಧಿಕಾರಿಗಳ ವರ್ಗದವರು ಫಲಿತಾಂಶದಲ್ಲಿ ತೋರಿದ ಸಾಧನೆಗೆ ಚಪ್ಪಾಳೆ ತಟ್ಟಿದರು. ಜಿಲ್ಲಾಡಳಿತವು ಸನ್ಮಾನ ಮಾಡಿ ಅಭಿನಂದನಾ ಪತ್ರಗಳನ್ನು ಸಹ ನೀಡಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ‘ಕಳೆದ ವರ್ಷಕ್ಕಿಂತ ಈ ಬಾರಿ ನಾಲ್ಕು ಸ್ಥಾನ ಮೇಲೆ ಬಂದಿದೆ. ಯಾದಗಿರಿಯು ರಾಜ್ಯದಲ್ಲೇ ಟಾಪ್ 10ರ ಒಳಗೆ ಬರಲು ಸಾಕಷ್ಟು ದೂರ ಇದೆ. ಇದಕ್ಕಾಗಿ ಪ್ರತಿಯೊಬ್ಬರು ಪ್ರಯತ್ನಿಸಿದರೆ ಫಲಿತಾಂಶ ಫಲ ಕೊಡುತ್ತದೆ’ ಎಂದು ಹೇಳಿದರು.

‘ಮುಖ್ಯಶಿಕ್ಷಕರು, ಶಿಕ್ಷಕರು, ರಾಜಕೀಯ ಪ್ರತಿನಿಧಿಗಳು ಮತ್ತು ಮಕ್ಕಳ ತಂದೆ–ತಾಯಿ ಕೈಜೋಡಿಸಿ ಕಾರ್ಯಪ್ರವೃತ್ತರಾಗಿ ಯಾದಗಿರಿಯನ್ನು ಮೇಲೆ ತರುವ ಪ್ರಯತ್ನ ಮಾಡೋಣ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಮಾತನಾಡಿ, ‘ಜಿಲ್ಲೆಯ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು ಶೇ 57ರಷ್ಟು ಹಾಗೂ ಪ್ರೌಢಶಾಲೆಗಳಲ್ಲಿ ಶೇ 41ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕೊಠಡಿಗಳ ಸಮಸ್ಯೆ ಇದೆ. ಶಾಲೆ ಬಿಡುವವರ ಸಂಖ್ಯೆಯೂ ಹೆಚ್ಚಿದೆ. ಜನರು ಹೊಟ್ಟೆಪಾಡಿಗಾಗಿ ಬೇರೆ ಕಡೆ ವಲಸೆ ಹೋಗುತ್ತಾರೆ. ಮಕ್ಕಳು ಹೊಲದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ. ಇಷ್ಟೆಲ್ಲಾ ಕಷ್ಟಗಳಿದ್ದರೂ ಜಿಲ್ಲೆಯು ಉತ್ತಮ ಫಲಿತಾಂಶ ದಾಖಲಿಸಿದೆ’ ಎಂದರು.

‘ಈ ಬಾರಿ ಶೇ 92ರಷ್ಟು ಫಲಿತಾಂಶ ಪಡೆದಿದ್ದು, ಸುಮಾರು 15ರಿಂದ 20 ಸಾವಿರ ವಿದ್ಯಾರ್ಥಿಗಳ ಭವಿಷ್ಯವನ್ನು ಉಳಿಸಿದ್ದೇವೆ. ಮುಂದಿನ ವರ್ಷ ಶೇ 100ರಷ್ಟು ಫಲಿತಾಂಶಕ್ಕಾಗಿ ಪ್ರಯತ್ನಿಸಬೇಕು. ಈಗಾಗಲೇ ಬುನಾದಿ ಕಲಿಕೆಗೆ ಒತ್ತು ನೀಡುತ್ತಿದ್ದೇವೆ. ಮುಂದಿನ ಐದು ವರ್ಷಗಳಲ್ಲಿ ಅದು ಉತ್ತಮ ಫಲಿತಾಂಶ ತಂದುಕೊಡಲಿದೆ’ ಎಂದು ಹೇಳಿದರು.

ಎಸ್ಪಿ ಪೃಥ್ವಿಕ್ ಶಂಕರ್ ಮಾತನಾಡಿ, ‘ಜಿಲ್ಲೆಯಲ್ಲಿ ಖಾಸಗಿ ಶಾಲೆಗಳು ಕಡಿಮೆ ಇದ್ದು, ಸರ್ಕಾರಿ ಶಾಲೆಗಳು ಹೆಚ್ಚಾಗಿವೆ. ಶಿಕ್ಷಕರ ಕೊರತೆಯ ನಡುವೆ ಸರ್ಕಾರಿ ಶಾಲೆಗಳು ಉತ್ತಮ ಫಲಿತಾಂಶ ಸಾಧಿಸಿದ್ದು ಪ್ರಶಂಸನೀಯ.

ಕಾರ್ಯಕ್ರಮದಲ್ಲಿ ಡಿಡಿಪಿಐ ಚನ್ನಬಸಪ್ಪ ಮುಧೋಳ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಚನ್ನಬಸಪ್ಪ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ ಕೆಂಭಾವಿ ಉಪಸ್ಥಿತರಿದ್ದರು.

ಜಿಲ್ಲಾ ನೋಡಲ್ ಅಧಿಕಾರಿ ಹನುಮಂತ ಸ್ವಾಗತಿಸಿ, ಕಿಶನ್ ಪವಾರ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-30-229469210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.