ಯಲಬುರ್ಗಾ: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳು ಒಟ್ಟು ಶೇ 95.14ರಷ್ಟು ಫಲಿತಾಂಶ ಪಡೆದಿವೆ.

ಪರೀಕ್ಷೆ ಬರೆದ 4,673 ವಿದ್ಯಾರ್ಥಿಗಳ ಪೈಕಿ 4,446 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ 2,079 ಬಾಲಕರು, 2,367 ಬಾಲಕಿಯರು ಪಾಸಾಗಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಕುಕನೂರು ತಾಲ್ಲೂಕಿನ ತಳಕಲ್ಲ ಗ್ರಾಮದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ವೇತಾ ಗೋವಿಂದಪ್ಪ ಸಾನಿ ಶೇ 99.36ರಷ್ಟು ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಶ್ರೀ ಶರಣಪ್ಪ ಕಿವುಡಿ ಶೇ 98.99ರಷ್ಟು ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಿರೇವಂಕಲಕುಂಟಾ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲೆ ವಿಭಾಗ) ವಿದ್ಯಾರ್ಥಿ ಹನಮೇಶ ಕಂಬಳಿ ಶೇ 97.92ರಷ್ಟು ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಇಂಗ್ಲಿಷ್ ಮಾಧ್ಯಮದಲ್ಲಿ ಕುಕನೂರಿನ ಎಸ್.ಎಫ್.ಎಸ್ ಪ್ರೌಢ ಶಾಲೆಯ ಅನುಷಾ ಸೋಮರಡ್ಡಿ ಶೇ 99.52ರಷ್ಟು ಅಂಕಗಳೊಂದಿಗೆ ಪ್ರಥಮ ಸ್ಥಾನ, ಯಲಬುರ್ಗಾ ತಾಲ್ಲೂಕಿನ ಹೊಸಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಶುಭಪ್ರಿಯಾ ಯಲ್ಲಪ್ಪ ಲಮಾಣಿ ಶೇ 99.20ರಷ್ಟು ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಲಿಂಗನಬಂಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಶ್ರೀನಿವಾಸ ಗೋಪಾಲ ಕಟ್ಟಿಮನಿ ಶೇ 98.24ರಷ್ಟು ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಒಟ್ಟು ಉಭಯ ತಾಲ್ಲೂಕಿಗೆ ಸಂಬಂಧಿಸಿದಂತೆ ಒಟ್ಟಾರೆ 14 ಸರ್ಕಾರಿ ಪ್ರೌಢಶಾಲೆಗಳು, 3 ಅನುದಾನಿತ ಪ್ರೌಢಶಾಲೆಗಳು, 7 ಅನುದಾನ ರಹಿತ ಪ್ರೌಢಶಾಲೆಗಳು, ಹಾಗೂ 11 ವಸತಿ ಸಹಿತ ಪ್ರೌಢಶಾಲೆಗಳು ಶೇ 100ರಷ್ಟು ಸಾಧನೆ ಮಾಡಿದ್ದು, ವಿಶೇಷ ದಾಖಲೆಯಾಗಿದೆ ಎಂದು ಬಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-35-876156886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.