ತಿ.ನರಸೀಪುರ: ‘ದೈಹಿಕ ನ್ಯೂನತೆಯ ಬಗ್ಗೆ ಆಲೋಚಿಸದೆ, ಪರಿಶ್ರಮದೊಂದಿಗೆ ಓದಿ ಉನ್ನತ ಶಿಕ್ಷಣದತ್ತ ಸಾಗಬೇಕು’ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ನಾಗೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪಟ್ಟಣದ ಬಿಆರ್ಸಿ ಕೇಂದ್ರದಲ್ಲಿ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಅಂಗವಿಕಲ ವಿದ್ಯಾರ್ಥಿಗಳಿಗೆ ಮಂಗಳವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೋಷಕರು ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಂತು ಅವರ ಸಾಧನೆಗೆ ಅಗತ್ಯ ಸಹಕಾರ ನೀಡಬೇಕು ಎಂದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ ಮಾತನಾಡಿ, ಸರ್ಕಾರ ವಿಶೇಷ ಚೇತನರಿಗೆ ಅನೇಕ ಸೌಲಭ್ಯ ನೀಡುತ್ತಿದ್ದು, ಅವುಗಳನ್ನು ಬಳಸಿ ಕೊಂಡು ಉಜ್ವಲ ರೂಪಿಸಿಕೊಳ್ಳುವಂತೆ ತಿಳಿಸಿದರು.

ಹೆಚ್ಚು ಅಂಕ ಪಡೆದ ಚಿದರಹಳ್ಳಿ ಸರ್ಕಾರಿ ಶಾಲೆಯ ಜಯಲಕ್ಷ್ಮೀ, ಗೌರಿಶಂಕರ ಪ್ರೌಢಶಾಲೆಯ ಶರತ್ವಿ, ದ್ಯೋದಯ ಶಾಲೆಯ ಶ್ರೇಯಾ ಅವರನ್ನು ಅಭಿನಂದಿಸಲಾಯಿತು.

ಇಲಾಖೆ ಶಿಕ್ಷಣ ಸಂಯೋಜಕರಾದ ರಮೇಶ್, ಬಸವರಾಜು, ಬಿಐಆರ್ಟಿ ಅಧಿಕಾರಿ ಆರ್.ವೆಂಕಟೇಶ್, ರಘು, ಸೌಜನ್ಯ, ಯೋಗೇಶ್ವರಿ, ಪ್ರೋಗ್ರಾಮರ್ ರವಿಚಂದ್ರ, ಭಾವನ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-38-1744531513

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.