ತೇರದಾಳ: ಪಿಯುಸಿಯಲ್ಲಿ ವಾಣಿಜ್ಯ ವಿಭಾಗ ಆಯ್ಕೆ ಮಾಡಿಕೊಂಡು ಅದರಲ್ಲಿಯೇ ಮುಂದುವರೆದು ಪದವಿ ಮುಗಿಸಿದರೆ ಈ ವಿಭಾಗದಲ್ಲಿ ವಿಫುಲವಾದ ಅವಕಾಶಗಳಿದ್ದು, ಸರಿಯಾದ ಮಾರ್ಗದರ್ಶನ ಪಡೆದು ಮುನ್ನಡೆದರೆ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ ಎಂದು ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಗಳ ಆಕ್ಯಾಡೆಮಿಕ್ ಡೀನ್ ವಿಶ್ವನಾಥ ರೆಡ್ಡಿ ಹೇಳಿದರು.

ದಾನಿಗೊಂಡ ಸಮೂಹ ಸಂಸ್ಥೆಯ ವಾಣಿಜ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು. ಭವಿಷ್ಯ ರೂಪಿಸುವಲ್ಲಿ ತಂದೆ ತಾಯಿಗಳ ಹಾಗೂ ಗುರುಗಳ ಪಾತ್ರ ಅತಿ ಮುಖ್ಯ ಎಂದರು.

ಉಪನ್ಯಾಸಕರಾದ ಬಿ.ಎಸ್. ಬಾಗೇವಾಡಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಬಿ.ಎಸ್. ನೇಗಿನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಮತ್ತು ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಅನುಪ್ರಿಯಾ ಬಾಗಿ ಹಾಗೂ ಸ್ನೇಹಾ ಮಲ್ಹೋತ್ರಾ ನಿರೂಪಿಸಿದರು. ಸಾಕ್ಷಿ ಲೋಕಾಪೂರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಐಶ್ವರ್ಯ ಬಿರಡಿ ಸ್ವಾಗತಿಸಿದರು. ವಾಣಿಶ್ರೀ ಹಳಿಂಗಳಿ ವಂದಿಸಿದರು. ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಪ್ರಕಾಶ ಮಾಳಿ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-19-1623599453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.