ವಿಜಯಪುರ: 2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ 49 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವ್ಯಾಸಂಗದ ವೇಳೆ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ₹2,500 ವರೆಗೆ ಶಿಷ್ಯವೇತನ ನೀಡಲಾಗುವುದು. ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದಿನಾಂಕ:01-07-2026ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಶ್ರೇಣಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

ಅರ್ಜಿ ಸಲ್ಲಿಕೆಗೆ ಮೇ 30 ಕೊನೆಯ ದಿನವಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-26-2117943407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.