ದೇವರಹಿಪ್ಪರಗಿ: ಪ್ರಯತ್ನಂ ಸರ್ವ ಸಿದ್ದಿ ಸಾಧನಂ ಎನ್ನುವಂತೆ ಪ್ರಯತ್ನವಾದಿ ಎಂದಿಗೂ ಸೋಲುವುದಿಲ್ಲ. ಆಗಲ್ಲ ಎಂದು ಹಿಂಜರಿದವನು ಎಂದಿಗೂ ಗೆಲ್ಲುವುದಿಲ್ಲ ಎಂದು ವಿಜಯಪುರ ಗೆಜ್ಜಿ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೆಜ್ಜಿ ಹೇಳಿದರು.

ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಕಾಯಕ ದಾಸೋಹ ಪ್ರತಿಷ್ಠಾನದ 16 ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ, ಸ್ಪರ್ಧಾತ್ಮಕತೆ ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರತಿಷ್ಠಾನದಿಂದ ಸನ್ಮಾನಿಸಲಾಯಿತು. ಸ್ಥಳೀಯ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎ.ಎಸ್.ವಾಲೀಕಾರ ಅವರು ಬರೆದ ‘ಎ ಥಿಯರಿ ಆಫ್ ಟೆಂಪರೇಚರ್’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.

ಅರವಿಂದ ಬಿರಾದಾರ ಇವರಿಗೆ ದಾಸೋಹರತ್ನ ಹಾಗೂ ಶಂಕರಗೌಡ ಬಿರಾದಾರ ಇವರಿಗೆ ದಾಸೋಹ ರೈತರತ್ನ ಪ್ರಶಸ್ತಿಯನ್ನು ಪ್ರತಿಷ್ಠಾನದಿಂದ ಪ್ರದಾನ ಮಾಡಲಾಯಿತು. ಶೇಕಡ ನೂರರಷ್ಟು ಫಲಿತಾಂಶ ಬರಲು ಕಾರಣರಾದ ಸ್ಥಳೀಯ ಪ್ರೌಢಶಾಲೆ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸೋಮಶೇಖರ ಹಿರೇಮಠ(ದೇವರಹಿಪ್ಪರಗಿ) ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಪ್ರತಿಷ್ಠಾನದ ಅಧ್ಯಕ್ಷ ಎನ್.ಬಿ.ರೋಡಗಿ, ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಸಾಯಬಣ್ಣ ಸೊನ್ನಳ್ಳಿ, ಗುರುರಾಜ ಆಕಳವಾಡಿ, ಎ.ಎಸ್.ವಾಲೀಕಾರ ಮಾತನಾಡಿದರು. ವಿಜಯಪುರ ಅನುಗ್ರಹ ಆಸ್ಪತ್ರೆಯ ಸುನೀಲಗೌಡ ಪಾಟೀಲ, ಶರಣಯ್ಯ ಮಂಗಲಗಿ, ಶರಣಗೌಡ ಪಾಟೀಲಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-26-1432080956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.