ವಿಜಯಪುರ: 2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಹಾಗೂ ನೀಟ್ ಮುಖಾಂತರ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಅಲ್ಪಸಂಖ್ಯಾತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಸಿಖ್, ಬೌದ್ಧ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ಪರೀಕ್ಷೆಗೆ ಹಾಜರಾಗಿ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಟಿ. ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸ್ಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಹೊಸದಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ.

ಸೌಲಭ್ಯ ಪಡೆಯುವವರು ನಿಗಮದ ವೆಬ್ಸೈಟ್: https://kmdconline.karnataka.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಸಿದ ಅರ್ಜಿಯ ಪ್ರಿಂಟ್ ಔಟ್ನ್ನು ತೆಗೆದುಕೊಂಡು ಇತರೆ ಅವಶ್ಯಕ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ನಂತರ ಅರ್ಹ ವಿದ್ಯಾರ್ಥಿಗಳಿಗೆ ಅವರು ಸೇರಬಯಸುವ ಕಾಲೇಜಿಗೆ ಬೋಧನಾ ಶುಲ್ಕವನ್ನು ನೇರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪಾವತಿಸಲಾಗುತ್ತದೆ.

ಮೇ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಬೆಂಗಳೂರಿನ ಕೆಎಂಡಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಝಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ - 586109. ದೂರವಾಣಿ ಸಂಖ್ಯೆ: 08352 278344 ಹಾಗೂ 8277944209 ಗೆ ಸಂಪರ್ಕಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-1352844393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.