ವಿಜಯಪುರ: ‘ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಲು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಿ, ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು’ ಎಂದು ಗೆಜ್ಜಿ ಕರಿಯರ್ ಅಕಾಡೆಮಿಯ ರಮೇಶ ಹಾದಿಮನಿ ಹೇಳಿದರು.

ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಸಮಾರೋಪ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ತಮ್ಮಲ್ಲಿರುವ ಕೀಳರಿಮೆ, ನಕಾರಾತ್ಮಕ ಚಿಂತನೆ ತೊರೆದು, ನನ್ನಿಂದ ಸಾಧ್ಯವಿಲ್ಲ– ಆಗುವುದಿಲ್ಲ ಎಂಬ ಮನೋಭಾವದಿಂದ ದೂರಾಗಬೇಕು’ ಎಂದು ಕಿವಿಮಾತು ಹೇಳಿದರು.

ಪ್ರಾಂಶುಪಾಲ ಎ.ಐ. ಹಂಜಗಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎ.ಆರ್. ದಿಂಡೂರ, ಸದಾಶಿವ ಗುಡ್ಡೋಡಗಿ, ಸುಮಂಗಲಾ ಕೋಟಿ, ಸಾಂಸ್ಕೃತಿಕ ವಿಭಾಗದ ಸಂಚಾಲಕ ಚಂದ್ರಕಾಂತ ಬಿ., ಕ್ರೀಡಾ ನಿರ್ದೇಶಕ ಪ್ರೊ. ಸಂಗಮೇಶ ಗುರವ, ಎನ್.ಎಸ್.ಎಸ್. ಘಟಕಗಳ ಅಧಿಕಾರಿಗಳಾದ ಸುನೀಲ ತೋಂಟಾಪೂರ, ದೇವೇಂದ್ರಗೌಡ ಪಾಟೀಲ, ಪ್ರೊ. ಸುನೀಲ ಹತ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-26-1773214616

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.